
ನಟಿ ದಿಶಾ ಪಟಾನಿ ಇಂದು ತಮ್ಮ 31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ 2015ರಲ್ಲಿ ತೆರೆಕಂಡ ತೆಲುಗಿನ ‘ಲೋಫರ್’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದ ದಿಶಾ ಪಟಾನಿ 2016ರಂದು ಎಂ ಎಸ್ ಧೋನಿ ದಿ ಅನ್ ಟೋಲ್ಡ್ ಸ್ಟೋರಿ ಸಿನಿಮಾ ಮೂಲಕ ಬಾಲಿವುಡ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.
ನಂತರ ಸಾಲುಸಾಲು ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ತೆಲುಗು ತಮಿಳು ಹಾಗೂ ಹಿಂದಿ ಚಿತ್ರರಂಗದ ಬೇಡಿಕೆಯ ನಟಿಯಾಗಿದ್ದಾರೆ.
ನಟಿ ದಿಶಾ ಪಟಾನಿ ಇತ್ತೀಚೆಗೆ ನಟಿಸಿರುವ ‘ಯೋಧ’ ಚಿತ್ರದ ಶೂಟಿಂಗ್ ಬಹುತೇಕ ಕಂಪ್ಲೀಟ್ ಆಗಿದ್ದು, ‘ಕಂಗುವ’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಸಿನಿತಾರೆಯರಿಂದ ದಿಶಾ ಪಟಾನಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.
