
ಖ್ಯಾತ ಹಿರಿಯ ನಟ ಲೋಕೇಶ್ ಅವರ ಪುತ್ರ ಸೃಜನ್ ಲೋಕೇಶ್ ಇಂದು ತಮ್ಮ 41ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸೃಜನ್ ಲೋಕೇಶ್ 1990ರಂದು ‘ಬುಜಂಗಯ್ಯನ ದಶಾವಾತಾರ’ ಎಂಬ ಚಿತ್ರದಲ್ಲಿ ಅಭಿನಯಿಸುವ ಮೂಲಕ ಬಾಲನಟನಾಗಿ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು.
2002ರಂದು ‘ನೀಲ ಮೇಘ ಶ್ಯಾಮ’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸಿದರು ಕೆಲವು ಧಾರಾವಾಹಿಗಳಲ್ಲೂ ಅಭಿನಯಿಸಿದರು ನಂತರ ಹಲವಾರು ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡರು.
ಬೆಣ್ಣೆಯಂತೆ ಕರಗುವ ‘ಗೋಧಿ ಹಲ್ವಾ’ ಸವಿಯಿರಿ
ಸೃಜನ್ ಲೋಕೇಶ್ ನಿರೂಪಕರಾಗಿ ಸಾಕಷ್ಟು ಜನಪ್ರಿಯತೆ ಪಡೆದರು. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಮಜಾ ಟಾಕೀಸ್’ ಕಾರ್ಯಕ್ರಮವನ್ನು ನಡೆಸಿಕೊಡುವ ಮೂಲಕ ಇನ್ನಷ್ಟು ಖ್ಯಾತಿ ಪಡೆದಿದ್ದಾರೆ. ಇಂದು ಸೃಜನ್ ಲೋಕೇಶ್ ಅವರಿಗೆ ಸಾಕಷ್ಟು ಸಿನಿಮಾ ಕಲಾವಿದರು ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.