ಬಹುಭಾಷಾ ನಟಿ ಸಿತಾರ ಇಂದು ತಮ್ಮ 48ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1982 ರಲ್ಲಿ ತಮಿಳಿನ ‘ಪುಧು ಪುಧು ಅರ್ಥಂಗಲ್’ ಎಂಬ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು.
ಸಿತಾರ ಕನ್ನಡದಲ್ಲಿ ಅಭಿನಯಿಸಿದ ಮೊದಲ ಚಿತ್ರ ‘ಇಂಡಿಯನ್’ ನಂತರ ‘ಹಾಲುಂಡ ತವರು’ ಸಿನಿಮಾದಲ್ಲಿ ವಿಷ್ಣುವರ್ಧನ್ ಅವರೊಂದಿಗೆ ನಾಯಕಿಯಾಗಿ ನಟಿಸಿದರು.
75 ಮಿಲಿಯನ್ ವೀಕ್ಷಣೆ ಪಡೆದ ‘ಪುಷ್ಪ’ ಚಿತ್ರದ ಟೀಸರ್
ನಟಿ ಸಿತಾರ ತಮಿಳು, ತೆಲುಗು, ಕನ್ನಡ, ಮಲಯಾಳಂ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. 2018 ರಲ್ಲಿ ಚಿರಂಜೀವಿ ಸರ್ಜಾ ನಟನೆಯ ‘ಅಮ್ಮ ಐ ಲವ್ ಯು’ ಚಿತ್ರದಲ್ಲಿ ಚಿರಂಜೀವಿ ಸರ್ಜಾ ಅವರ ತಾಯಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸಿನಿಮಾ ಕಲಾವಿದರು ಸಿತಾರ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.