alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಗೋಲ್ಡನ್ ಸ್ಟಾರ್ ಗಣೇಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಗೋಲ್ಡನ್ ಸ್ಟಾರ್ ಗಣೇಶ್

ಗೋಲ್ಡನ್ ಸ್ಟಾರ್ ಗಣೇಶ್ ಇಂದು ತಮ್ಮ 41ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.ʼಕಾಮಿಡಿ ಟೈಮ್ʼ ಮೂಲಕ ಮನೆಮಾತಾಗಿದ್ದ  ಗಣೇಶ್ 2006ರಲ್ಲಿ ಎಂ ಡಿ ಶ್ರೀಧರ್ ನಿರ್ದೇಶನದ ‘ಚೆಲ್ಲಾಟ’ ಚಿತ್ರದಲ್ಲಿ ಮೊದಲ ಬಾರಿ ನಾಯಕನಾಗಿ ನಟಿಸಿದರು. ಗಣೇಶ್ ಗೆ ಜೋಡಿಯಾಗಿ ರೇಖಾ ಅಭಿನಯಿಸಿದ್ದರು. ಇದಕ್ಕೂ ಮುಂಚೆ ಗಣೇಶ್ ಕೆಲವು ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.

ಮಂಗಳಮುಖಿಯರಿಂದ ಆಘಾತಕಾರಿ ಕೃತ್ಯ

ಗಣೇಶ್ ನಂತರ ನಟಿಸಿದ ‘ಮುಂಗಾರು ಮಳೆ’  ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುವ ಮೂಲಕ ಹಲವು ದಾಖಲೆಗಳನ್ನು ಬರೆಯಿತು. 1 ವರ್ಷ ಪ್ರದರ್ಶನ ಕಂಡ ಈ ಸಿನಿಮಾ 75 ಕೋಟಿ ಕಲೆಕ್ಷನ್ ಮಾಡಿತ್ತು. ಈ ಚಿತ್ರದ ಮೂಲಕ ಗಣೇಶ್ ಒಬ್ಬ ಸ್ಟಾರ್ ನಟರಾದರು.

ನಂತರ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾದರು. ಇಂದು ಗಣೇಶ್ ಹುಟ್ಟುಹಬ್ಬದ ಪ್ರಯುಕ್ತ ಗಣೇಶ್ ಅಭಿನಯದ ‘ಗಾಳಿಪಟ 2’ ಚಿತ್ರದ ಮೋಷನ್ ಪೋಸ್ಟರ್ ಅನ್ನು ಬಿಡುಗಡೆ ಮಾಡಲಿದ್ದಾರೆ. ಮತ್ತೊಂದೆಡೆ ‘ತ್ರಿಬಲ್ ರೈಡಿಂಗ್’ ಸಿನಿಮಾದ ಟೀಸರ್ ಅನ್ನು ರಿಲೀಸ್ ಮಾಡುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...