alex Certify ಹುಟ್ಟುಹಬ್ಬ ಸಂಭ್ರಮದಲ್ಲಿ ನಟ ಶ್ರೀನಗರ ಕಿಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬ ಸಂಭ್ರಮದಲ್ಲಿ ನಟ ಶ್ರೀನಗರ ಕಿಟ್ಟಿ

ಸ್ಯಾಂಡಲ್ ವುಡ್ ನ ಪ್ರತಿಭಾವಂತ ನಟ ಶ್ರೀನಗರ ಕಿಟ್ಟಿ ಇಂದು ತಮ್ಮ 44ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಶ್ರೀನಗರ ಕಿಟ್ಟಿ 2003ರಲ್ಲಿ ತೆರೆಕಂಡ ‘ಚಂದ್ರ ಚಕೋರಿ’ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ನಟಿಸುವ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. 2005ರಲ್ಲಿ ‘ಗಿರಿ’ ಸಿನಿಮಾದಲ್ಲಿ ನಾಯಕನಟನಾದರು. ನಂತರ ಸಾಕಷ್ಟು ಚಿತ್ರಗಳಲ್ಲಿ ಅಭಿನಯಿಸಿದ್ದು 2008ರಲ್ಲಿ ‘ಇಂತಿ ನಿನ್ನ ಪ್ರೀತಿಯ’ ಚಿತ್ರದಲ್ಲಿ ರಾಜೀವ ಎಂಬ ಪಾತ್ರದ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು ದುನಿಯಾ ಸೂರಿ ಈ ಸಿನಿಮಾ ನಿರ್ದೇಶಿಸಿದ್ದರು. ಸೋನು ಗೌಡ ಹಾಗೂ ಭಾವನಾ ಇಬ್ಬರು ನಾಯಕಿಯರು ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ನಿಮ್ಮ ಕಿವಿಯಲ್ಲೇ ಇದೆ ಅನೇಕ ಸಮಸ್ಯೆಗಳಿಗೆ ಪರಿಹಾರ

ಶ್ರೀನಗರ ಕಿಟ್ಟಿ ಇತ್ತೀಚೆಗೆ ‘ಗರುಡ’ ಹಾಗೂ ‘ಅವತಾರ ಪುರುಷ’ಸೇರಿದಂತೆ ‘ಗೌಳಿ’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.ರಘು ಸಿಂಗಮ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.ಇಂದು ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಕಲಾವಿದರು ಶ್ರೀನಗರ ಕಿಟ್ಟಿಗೆ ವಿಶ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...