
ಸ್ಯಾಂಡಲ್ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಸಾರಥಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಟಿ ದೀಪಾ ಸನ್ನಿದಿ ಇಂದು ತಮ್ಮ 33ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
2011 ತೆರೆಕಂಡಿದ್ದ ಸಾರಥಿ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದೂಳೆಬ್ಬಿಸುವ ಮೂಲಕ ಹೊಸ ದಾಖಲೆ ಬರೆಯಿತು. ತಮ್ಮ ಮೊದಲ ಚಿತ್ರದಲ್ಲೆ ಭರ್ಜರಿ ಯಶಸ್ಸು ಕಂಡ ದೀಪ ಸನ್ನಿಧಿಗೆ ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿತು
ದೀಪಾ ಸನ್ನಿಧಿ ನಂತರ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರೊಂದಿಗೆ ‘ಪರಮಾತ್ಮ’ ಚಿತ್ರದಲ್ಲಿ ಕಾಣಿಸಿಕೊಂಡರು.
ಜಾನು, ಸಕ್ಕರೆ, ‘ಎಂದೆಂದು ನಿನಗಾಗಿ’ ಮುಂತಾದ ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಬೇಡಿಕೆಯ ನಟಿಯಾಗಿ ಹೊರಹೊಮ್ಮಿದರು, ದರ್ಶನ್ ಜೊತೆ ‘ಚಕ್ರವರ್ತಿ’ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ದೀಪ ಸನ್ನಿದಿ ಇತ್ತೀಚಿಗೆ ಚಿತ್ರರಂಗದಿಂದ ದೂರ ಉಳಿದಿದ್ದಾರೆ.

