
ಪ್ರಚೋದನಕಾರಿ ವಾಟ್ಸಪ್ ಸ್ಟೇಟಸ್ ವಿಡಿಯೋದಿಂದಾಗಿ ಹುಬ್ಬಳ್ಳಿಯಲ್ಲಿ ಕಳೆದ ಮೂರು ದಿನಗಳಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹುಬ್ಬಳ್ಳಿ ಗಲಭೆಗೆ ಕಾಂಗ್ರೆಸ್ ನಾಯಕರೇ ಕಾರಣ ಎಂದು ಬಿಜೆಪಿ ಆರೋಪಿಸಿದೆ.
ಗಲಭೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ ಅವರೇ ಕಾರಣ. ಮೌಲ್ವಿಯ ಪ್ರಚೋದನಾ ಭಾಷಣದ ವೇಳೆ ಅಲ್ತಾಫ್ ಅವರು ಶಾಂತಿ ಕದಡಲು ಗಲಭೆಗೆ ಪ್ರಚೋದನೆ ನೀಡಿದ್ದಾರೆ ಎಂದು ಟ್ವಿಟ್ಟರ್ ನಲ್ಲಿ ಬಿಜೆಪಿ ಗಂಭೀರ ಆರೋಪ ಮಾಡಿದ.
ಅನೇಕ ಸಮಸ್ಯೆಗಳಿಗೆ ಪರಿಹಾರ ನೀಡುತ್ತೆ ತೆಂಗಿನ ಕಾಯಿ
ಮೀರ್ ಸಾದಿಕ್ ಸಿಎಂ ಆಗಿದ್ದ ಸಂದರ್ಭದಲ್ಲಿ ಸೆರೆಮನೆಯಲ್ಲಿದ್ದವರಿಗೆ ತರಬೇತಿ ಕೊಟ್ಟು ಬಿಡುಗಡೆಗೊಳಿಸಿದ್ದಾರೆ. ಇದೀಗ ಈ ಗಲಭೆಗೆ ಅವರೇ ನೇರ ಕಾರಣ ಎಂದು ಬಿಜೆಪಿ ಟ್ವೀಟ್ ಮಾಡಿದೆ.