
ಹೌದು, ಇದೀಗ ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ಅವರ ಮುಂದಿನ ಚಿತ್ರದಲ್ಲಿ ಜಾಹ್ನವಿ ಕಪೂರ್ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದ್ದು, ಕೊರಟಾಲ ಶಿವ ಆಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರದ ಶೂಟಿಂಗ್ ಈಗಾಗಲೇ ಆರಂಭವಾಗಿದೆ.
ಈ ಚಿತ್ರಕ್ಕೆ ಜಾಹ್ನವಿ ಕಪೂರ್ ಬರೋಬ್ಬರಿ 5 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದ್ದು, ಇದು ಟಾಲಿವುಡ್ ಚಿತ್ರರಂಗ ಅಚ್ಚರಿಗೊಳಗಾಗುವಂತೆ ಮಾಡಿದೆ. ಆರ್ ಆರ್ ಆರ್ ಭರ್ಜರಿ ಯಶಸ್ಸಿನ ಬಳಿಕ ಜೂನಿಯರ್ ಎನ್.ಟಿ.ಆರ್. ಅವರ ಈ ಚಿತ್ರ ಕೂಡ ಅಭಿಮಾನಿಗಳಲ್ಲಿ ಅಪಾರ ನಿರೀಕ್ಷೆಯನ್ನು ಹುಟ್ಟು ಹಾಕಿದೆ.