ಮಂಗಳೂರು : ಪೊಲೀಸ್ ಮುಖ್ಯ ಪೇದೆ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಈ ಘಟನೆ ತೀರ್ಥಹಳ್ಳಿಯಲ್ಲಿ ಮಂಗಳವಾರ ರಾತ್ರಿಯೇ ನಡೆದಿದೆ ಎನ್ನಲಾಗಿದ್ದು, ಮೃತರು ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಇವರು ಮಂಗಳವಾರ ರಾತ್ರಿ ತೀರ್ಥಹಳ್ಳಿಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅವರಿಗೆ ಹೃದಯಾಘಾತ ಸಂಭವಿಸಿದೆ. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ಹೆಡ್ ಕಾನ್ ಸ್ಟೇಬಲ್ ಅವರನ್ನು ಸಂತೋಷ ಎಂದು ಗುರುತಿಸಲಾಗಿದ್ದು, ಅವರ ಸಾವಿಗೆ ಇಡೀ ಪೊಲೀಸ್ ಇಲಾಖೆ ಕಂಬನಿ ಮಿಡಿಯುತ್ತಿದೆ. ಅವರು ಸೇವೆ ಸಲ್ಲಿಸುತ್ತಿದ್ದ ಪೊಲೀಸ್ ಠಾಣೆಯ ಇನ್ನಿತರ ಸಿಬ್ಬಂದಿಗಳು ಹಾಗೂ ರಾಜ್ಯದ ಪೊಲೀಸರು ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.