
ಹೃದಯಾಘಾತದಿಂದ ಮಾಜಿ ಸಚಿವ ಅಂಜನ ಮೂರ್ತಿ ವಿಧಿವಶರಾಗಿದ್ದಾರೆ. 72 ವರ್ಷದ ಅಂಜನ ಮೂರ್ತಿ ಇಂದು ಬೆಳಿಗ್ಗೆ ಮಲ್ಲೇಶ್ವರಂ ನ ಅಪೊಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ವಸತಿ ಸಚಿವರಾಗಿ, ಉಪಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದ ಅಂಜನ ಮೂರ್ತಿಯವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಇಂದಿರಾ ನಗರದಲ್ಲಿ ವಾಸವಾಗಿದ್ದರು.
ಅಂಜನ ಮೂರ್ತಿಯವರ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.