alex Certify ಹೃದಯ ವಿದ್ರಾವಕ ಘಟನೆ: ಸಕಾಲಕ್ಕೆ ಅಂಬುಲೆನ್ಸ್ ಸಿಗದೆ ನರಳಿ ಪ್ರಾಣಬಿಟ್ಟ ಬೈಕ್ ಸವಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೃದಯ ವಿದ್ರಾವಕ ಘಟನೆ: ಸಕಾಲಕ್ಕೆ ಅಂಬುಲೆನ್ಸ್ ಸಿಗದೆ ನರಳಿ ಪ್ರಾಣಬಿಟ್ಟ ಬೈಕ್ ಸವಾರ

ಹಾಸನ ಜಿಲ್ಲೆಯಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ಅಪರಿಚಿತ ವಾಹನ ಡಿಕ್ಕಿಯಾಗಿ ತೀವ್ರ ರಕ್ತಸ್ರಾವದಿಂದ ರಸ್ತೆ ಬದಿ ನರಳುತ್ತ ಬಿದ್ದಿದ್ದ ಬೈಕ್ ಸವಾರ ಸಕಾಲಕ್ಕೆ ಅಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಗುರುವಾರ ತಡರಾತ್ರಿ ಹಾಸನ ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಇಬ್ಬೀಡು ಗ್ರಾಮದ ಆನಂದ್ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿತ್ತು. ಇದರ ಪರಿಣಾಮವಾಗಿ ಆನಂದ್ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದರು.

ಇದನ್ನು ಗಮನಿಸಿದ ಸ್ಥಳೀಯರು ಆಂಬುಲೆನ್ಸ್ ಗೆ ಕರೆ ಮಾಡಿದ್ದು, ಆದರೆ ತಕ್ಷಣವೇ ತುರ್ತು ಚಿಕಿತ್ಸಾ ವಾಹನ ಬರಲಿಲ್ಲ ಎಂದು ಹೇಳಲಾಗಿದೆ. ಇದರ ಪರಿಣಾಮವಾಗಿ ತೀವ್ರ ರಕ್ತಸ್ರಾವದಿಂದ ಆನಂದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...