alex Certify ಹೆಣ್ಣುಮಕ್ಕಳ ಮದುವೆ ವಯಸ್ಸು ಏರಿಕೆ ಮಸೂದೆ; ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಣ್ಣುಮಕ್ಕಳ ಮದುವೆ ವಯಸ್ಸು ಏರಿಕೆ ಮಸೂದೆ; ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಹೆಣ್ಣುಮಕ್ಕಳ ಮದುವೆ ವಯಸ್ಸನ್ನು ಈಗಿರುವ 18 ರಿಂದ 21 ಕ್ಕೇರಿಸುವ ಪ್ರಸ್ತಾಪ ಈ ಹಿಂದೆ ಕೇಳಿ ಬಂದಿತ್ತು.

2020ರ ಜೂನ್‌ನಲ್ಲಿ ಸರ್ಕಾರ ರಚಿಸಿದ್ದ, ಜಯಾ ಜೇಟ್ಲಿ ನೇತೃತ್ವದ ಕಾರ್ಯಪಡೆಯು ಹೆಣ್ಣುಮಕ್ಕಳ ಮದುವೆ ವಯಸ್ಸಿನ ಮಿತಿಯನ್ನು ಹೆಚ್ಚಿಸುವ ಶಿಫಾರಸು ಮಾಡಿತ್ತು. ಇದರ ಬೆನ್ನಲ್ಲೇ ಮಿಶ್ರ ಪ್ರತಿಕ್ರಿಯೆಗಳು ಕೇಳಿ ಬಂದಿದ್ದವು.

ಇದೀಗ ತಿದ್ದುಪಡಿ ಮಸೂದೆಯ ಪರಿಶೀಲನೆ ನಡೆಸಲು ಸಂಸದೀಯ ಸ್ಥಾಯಿ ಸಮಿತಿಗೆ ನೀಡಿರುವ ಕಾಲಾವಕಾಶವನ್ನು ಮತ್ತೆ ಮೂರು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ. ಇದು ಮೂರನೇ ಬಾರಿಯ ಸಮಯಾವಕಾಶದ ವಿಸ್ತರಣೆಯಾಗಿದೆ. ಈ ವಿಚಾರ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಚರ್ಚೆಗೆ ಬರುವ ಸಾಧ್ಯತೆ ತೀರಾ ಕಡಿಮೆ ಇದೆ ಎನ್ನಲಾಗಿದೆ.

ಬಾಲ್ಯ ವಿವಾಹ ತಡೆ ಕಾಯ್ದೆ- 2021ರ ಪರಿಶೀಲನೆಯನ್ನ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಯುವಜನ ಮತ್ತು ಕ್ರೀಡೆಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿಯು ನಡೆಸುತ್ತಿದೆ. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ಇದಕ್ಕೆ ಅನುಮತಿ ನೀಡಿದ್ದಾರೆ. ಇನ್ನು ಈ ಮಸೂದೆ ಕುರಿತು ವರದಿ ಸಲ್ಲಿಸಲು ಸಮಿತಿಗೆ ಜನವರಿ 23ರ ವರೆಗೆ ಸಮಯಾವಕಾಶ ಇದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...