ಹೆದ್ದಾರಿ ಪಕ್ಕ ಕಟ್ಟಡ ನಿರ್ಮಾಣ ಮಾಡುವ ಕುರಿತಂತೆ ರಾಜ್ಯ ಸರ್ಕಾರ 2005ರಲ್ಲಿ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿಯುವ ಮೂಲಕ ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ತೀರ್ಪು ನೀಡಿದೆ.
ಉಡುಪಿಯ ಕಾಪುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಟ್ಟಡ ನಿರ್ಮಾಣ ಪ್ರಶ್ನಿಸಿ ನಡ್ಸಲ್ ಗ್ರಾಮದ ದಯಾನಂದ ಬಿ ಶೆಟ್ಟಿ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಈ ತೀರ್ಪು ನೀಡಲಾಗಿದೆ.
ರಾಷ್ಟ್ರೀಯ ಹೆದ್ದಾರಿಯ ಮಧ್ಯಭಾಗದಿಂದ 40 ಮೀಟರ್ ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ ಎಂಬ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ವಿಭಾಗೀಯ ಪೀಠದ ಹಿರಿಯ ನ್ಯಾಯಾಧೀಶ ಸತೀಶ್ಚಂದ್ರ ಶರ್ಮ ಎತ್ತಿಹಿಡಿದಿದ್ದಾರೆ.