alex Certify ಹೆಸರು ಬದಲಿಸಿಕೊಳ್ಳಲು ನನಗೇನು ತಲೆಕೆಟ್ಟಿದೆಯಾ ? ವದಂತಿಗೆ ಶೋಭಾ ಕರಂದ್ಲಾಜೆ ಗರಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಸರು ಬದಲಿಸಿಕೊಳ್ಳಲು ನನಗೇನು ತಲೆಕೆಟ್ಟಿದೆಯಾ ? ವದಂತಿಗೆ ಶೋಭಾ ಕರಂದ್ಲಾಜೆ ಗರಂ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ಹೆಸರನ್ನು ಶೋಭಾ ಗೌಡ ಎಂದು ಬದಲಿಸಿಕೊಳ್ಳಲಿದ್ದಾರೆ. ಅಲ್ಲದೆ ಮುಂಬರುವ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುವ ಅವರು, ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂಬ ವದಂತಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿತ್ತು.

ಈಗ ಸ್ವತಃ ಶೋಭಾ ಕರಂದ್ಲಾಜೆಯವರೇ ಈ ವದಂತಿಗೆ ತೆರೆ ಎಳೆದಿದ್ದು, ಹೆಸರು ಬದಲಿಸಿಕೊಳ್ಳಲು ನನಗೇನು ತಲೆಕೆಟ್ಟಿದೆಯಾ ಎಂದು ಗರಂ ಆಗಿದ್ದಾರೆ. ಯಾರೋ ಈ ರೀತಿಯ ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದು ಶೋಭಾ ಕರಂದ್ಲಾಜೆ ಗುಡುಗಿದ್ದಾರೆ.

ರಾಜಕಾರಣಿಗಳನ್ನು ಕೆಲವರು ಜೋಕರ್ಸ್ ಅಂದುಕೊಂಡಿದ್ದಾರೆ. ಹೀಗಾಗಿ ಇಲ್ಲಸಲ್ಲದ ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸುತ್ತಾರೆ. ಯಾವ ಕಾರಣಕ್ಕಾಗಿ ಈ ಚರ್ಚೆ ಆರಂಭವಾಯಿತೋ ನನಗೆ ತಿಳಿದಿಲ್ಲ. ಹೆಸರು ಬದಲಾವಣೆ ಮಾಡಿಕೊಳ್ಳುವ ಇರಾದೆಯೂ ನನಗಿಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...