alex Certify ‘ಹೈಕೋರ್ಟ್’ ನಲ್ಲಿಂದು ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಹೈಕೋರ್ಟ್’ ನಲ್ಲಿಂದು ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ.

ನ್ಯಾಯಮೂರ್ತಿ ಪಿ‌.ಎಂ‌. ನವಾಜ್ ಅವರ ಏಕ ಸದಸ್ಯ ಪೀಠ ಮುರುಘಾ ಮಠದ ಶಿವಮೂರ್ತಿ ಶ್ರೀಗಳ ಜಾಮೀನು ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲಿದ್ದು, ಶ್ರೀಗಳ ಪರವಾಗಿ ಸಂದೀಪ್ ಎಸ್ ಪಾಟೀಲ್ ವಕಾಲತ್ತು ನಡೆಸಲಿದ್ದಾರೆ.

ಶ್ರೀ ಮಠದಿಂದ ನಡೆಸುತ್ತಿರುವ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ 2022ರ ಸೆಪ್ಟೆಂಬರ್ 1 ರಿಂದ ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಶರಣರು ಜಾಮೀನು ನೀಡುವಂತೆ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...