ಮೈಸೂರು: ಹೈಟೆಕ್ ಕಾಲ್ ಟ್ರಾಫಿಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳದ ಆಶ್ರಫ್, ಶಮೀಮ್ ಬಂಧಿತ ಆರೋಪಿಗಳು. ಇಬ್ಬರೂ ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಕನ್ವರ್ಟ್ ಮಾಡುತ್ತಿದ್ದರು. ಸಿಮ್ ಬಾಕ್ಸ್ ಹಾಗೂ ರೂಟರ್ ಮೂಲಕ ಕರೆಗಳನ್ನು ಕನ್ವರ್ಟ್ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
BIG NEWS: ಬಿ.ಎಲ್.ಸಂತೋಷ್, ಧರ್ಮೇಂದ್ರ ಪ್ರಧಾನ್ ಭೇಟಿಯಾದ ಸಿಎಂ ಬೊಮ್ಮಾಯಿ
ಬಂಧಿತರಿಂದ 500ಕ್ಕೂ ಹೆಚ್ಚು ಸಿಮ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಕಾಲ್ ಕನ್ವರ್ಟ್ ನಿಂದಾಗಿ ಸರ್ಕಾರ, ಟೆಲಿಕಾಂ ಕಂಪನಿಗಳಿಗೆ ಕೋಟ್ಯಂತರ ರೂಪಾಯಿ ನಷ್ಟವಾಗುತ್ತಿದ್ದು, ಆರೋಪಿಗಳನ್ನು ಮತ್ತಷ್ಟು ತನಿಖೆಗೆ ಒಳಪಡಿಸಲಾಗುವುದು ಎಂದು ಮೈಸೂರು ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಮಾಹಿತಿ ನೀಡಿದ್ದಾರೆ.