alex Certify ಹೈಸ್ಪೀಡ್ ‘ಇಂಟರ್ನೆಟ್’ ಸೌಲಭ್ಯಕ್ಕೆ ಸಾಗರ ತಾಲೂಕು ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೈಸ್ಪೀಡ್ ‘ಇಂಟರ್ನೆಟ್’ ಸೌಲಭ್ಯಕ್ಕೆ ಸಾಗರ ತಾಲೂಕು ಆಯ್ಕೆ

ಭಾರತ ಸಂಚಾರ ನಿಗಮವು ಹೈ ಸ್ಪೀಡ್ ಇಂಟರ್ನೆಟ್ ಸೌಲಭ್ಯವನ್ನು ಗ್ರಾಮಾಂತರ ಪ್ರದೇಶಗಳಲ್ಲಿ ಒದಗಿಸುವ ಸಲುವಾಗಿ ಹೊಸ ಯೋಜನೆಯೊಂದನ್ನು ರೂಪಿಸಿದ್ದು, ಪ್ರಾಯೋಗಿಕವಾಗಿ ಇದು ದೇಶದ ನಾಲ್ಕು ಪ್ರದೇಶಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಈ ನಾಲ್ಕು ಪ್ರದೇಶಗಳ ಪೈಕಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಸಹ ಆಯ್ಕೆಯಾಗಿದ್ದು, ಸಂಸದ ಬಿ.ವೈ. ರಾಘವೇಂದ್ರ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೇರಿ ಹೊಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ ಈ ವಿಷಯ ತಿಳಿಸಿದ್ದಾರೆ.

ಮಲೆನಾಡು ಭಾಗದಲ್ಲಿ ಇಂಟರ್ನೆಟ್ ಸೌಲಭ್ಯ ಒದಗಿಸುವಂತೆ ತಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ಈ ಹಿನ್ನಲೆಯಲ್ಲಿ ಈಗ ಪ್ರಾಯೋಗಿಕವಾಗಿ ಮಲೆನಾಡಿನ ಸಾಗರ ತಾಲೂಕನ್ನು ಹೈ ಸ್ಪೀಡ್ ಇಂಟರ್ನೆಟ್ ಸೌಲಭ್ಯಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...