ರಾಜ್ಯ ಸರ್ಕಾರ ಈ ಹಿಂದೆ ಹೊರಡಿಸಿದ್ದ ಕೆಲ ಆದೇಶಗಳನ್ನು ತಕ್ಷಣವೇ ಹಿಂಪಡೆದು ಟೀಕೆಗೆ ಗುರಿಯಾಗಿತ್ತು. ಇದಕ್ಕೆ ಉದಾಹರಣೆ ಎಂಬಂತೆ ಸರ್ಕಾರಿ ಕಚೇರಿಗಳಲ್ಲಿ ಫೋಟೋ – ವಿಡಿಯೋ ಮಾಡುವಂತೆ ಹೊರಡಿಸಿದ್ದ ಆದೇಶವನ್ನು ಕೆಲ ಗಂಟೆಗಳಲ್ಲೇ ಹಿಂದಕ್ಕೆ ಪಡೆಯಲಾಗಿತ್ತು.
ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಲಭೆ ನಡೆದಿದ್ದ ವೇಳೆ ಬೈಕ್ ಹಿಂಬದಿ ಸವಾರರಿಗೆ ನಿರ್ಬಂಧ ವಿಧಿಸಿ ಹೊರಡಿಸಿದ್ದ ಆದೇಶವನ್ನು ಕೂಡ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾದ ಬಳಿಕ ಹಿಂದೆ ಪಡೆಯಲಾಗಿತ್ತು. ಇದೀಗ ಇದಕ್ಕೆ ಮತ್ತೊಂದು ಆದೇಶ ಸೇರ್ಪಡೆಯಾಗಿದೆ.
ಟ್ರಸ್ಟ್, ಪ್ರತಿಷ್ಠಾನಗಳಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಿಸಿ ಹೊರಡಿಸಲಾಗಿದ್ದ ನೇಮಕಾತಿ ಆದೇಶವನ್ನು ಈಗ ರಾಜ್ಯ ಸರ್ಕಾರ ಹಿಂಪಡೆದಿದೆ. ಚಿಕ್ಕಮಗಳೂರಿನ ಕೆಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ ಕಳೆದ ವರ್ಷ ನಿಧನರಾಗಿರುವ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಿ ಸರ್ಕಾರ ನಗೆಪಾಟಲಿಗೀಡಾಗಿತ್ತು. ಇದೀಗ ಇಡೀ ನೇಮಕಾತಿ ಆದೇಶವನ್ನೇ ಹಿಂಪಡೆಯಲಾಗಿದೆ.