alex Certify ಹೊಸಪೇಟೆಯಲ್ಲಿ ಪುನೀತ್ ರಾಜಕುಮಾರ್ ಪುತ್ಥಳಿ ಅನಾವರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸಪೇಟೆಯಲ್ಲಿ ಪುನೀತ್ ರಾಜಕುಮಾರ್ ಪುತ್ಥಳಿ ಅನಾವರಣ

ಖ್ಯಾತ ನಟ ಪವರ್ ಸ್ಟಾರ್ ದಿ. ಪುನೀತ್ ರಾಜಕುಮಾರ್ ಅವರ ಪುತ್ಥಳಿಯನ್ನು ಹೊಸಪೇಟೆಯಲ್ಲಿ ಅನಾವರಣ ಮಾಡಲಾಗಿದ್ದು, ಈ ಸಮಾರಂಭಕ್ಕೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದರು. ಅಲ್ಲದೆ ಪುನೀತ್ ರಾಜಕುಮಾರ್ ಅವರ ಸಹೋದರ ರಾಘವೇಂದ್ರ ರಾಜಕುಮಾರ್ ಕುಟುಂಬ ಸಮೇತರಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಹೊಸಪೇಟೆ ನಗರದ ಪುನೀತ್ ರಾಜಕುಮಾರ್ ಸರ್ಕಲ್ ನಲ್ಲಿ 7.4 ಅಡಿ ಎತ್ತರದ ಪುನೀತ್ ರಾಜಕುಮಾರ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಿದ್ದು, ಸಮಾರಂಭದಲ್ಲಿ ಸಹಸ್ರಾರು ಸಂಖ್ಯೆಯ ಅಭಿಮಾನಿಗಳು ಪಾಲ್ಗೊಂಡು ತಮ್ಮ ನೆಚ್ಚಿನ ನಟನಿಗೆ ಗೌರವ ಸಲ್ಲಿಸಿದರು.

ಅಭಿಮಾನಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಪರಿಣಾಮ ಕೆಲಕಾಲ ನೂಕುನುಗ್ಗಲು ಉಂಟಾಯಿತಾದರೂ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದರು. ಕಾರ್ಯಕ್ರಮದಲ್ಲಿ ನಟ ಅಜೇಯರಾವ್, ಸಚಿವ ಆನಂದ್ ಸಿಂಗ್, ಅವರ ಪುತ್ರ ಪುತ್ರ ಸಿದ್ಧಾರ್ಥ್ ಸಿಂಗ್, ನಿರ್ದೇಶಕ ಸಂತೋಷ್ ಆನಂದ್ ರಾಮ್ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...