alex Certify ಹೊಸ ಚಿತ್ರ ಘೋಷಣೆ ಮಾಡಿದೆ ಹೊಂಬಾಳೆ ಫಿಲ್ಮ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ಚಿತ್ರ ಘೋಷಣೆ ಮಾಡಿದೆ ಹೊಂಬಾಳೆ ಫಿಲ್ಮ್ಸ್

ಕೆಜಿಎಫ್ ಸಿನಿಮಾ ನಿರ್ಮಾಣ ಮಾಡಿದ್ದ ಹೊಂಬಾಳೆ ಫಿಲ್ಮ್ಸ್ ಈಗಾಗಲೇ ಸಾಕಷ್ಟು ಪ್ಯಾನ್ ಇಂಡಿಯಾ ಚಿತ್ರಗಳನ್ನು ನಿರ್ಮಾಣ ಮಾಡುತ್ತಲೇ ಇದೆ. ಇದೀಗ ಹೊಸ ಚಿತ್ರದ ಟೈಟಲ್ ಪೋಸ್ಟರ್ ವೊಂದನ್ನು ಹೊಂಬಾಳೆ ಫಿಲ್ಮ್ಸ್ ತನ್ನ ಅಧಿಕೃತ ಇನ್ ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದೆ. ‘ಧೂಮಮ್’ ಎಂಬ ಶೀರ್ಷಿಕೆ ಹೊಂದಿರುವ ಈ ಚಿತ್ರವನ್ನು ಕನ್ನಡ ಸೇರಿದಂತೆ ತೆಲುಗು, ತಮಿಳು, ಹಾಗೂ ಮಲಯಾಳಂ ಭಾಷೆಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ.

ವಿಜಯ್ ಕಿರಗಂದೂರ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಪವನ್ ಕುಮಾರ್  ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಟ ಫಹಾದ್ ಫಾಸಿಲ್ ಹಾಗೂ ಅಪರ್ಣಾ ಬಾಲಮುರಳಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಲಿದ್ದು ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜನೆ ನೀಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...