alex Certify ಹೊಸ ಬಿಡುಗಡೆ ದಿನಾಂಕ ಘೋಷಣೆ ಮಾಡಿದ ‘ಸರ್ಕಾರು ವಾರಿಪಾಟ’ ಚಿತ್ರತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ಬಿಡುಗಡೆ ದಿನಾಂಕ ಘೋಷಣೆ ಮಾಡಿದ ‘ಸರ್ಕಾರು ವಾರಿಪಾಟ’ ಚಿತ್ರತಂಡ

ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ನಟನೆಯ ‘ಸರ್ಕಾರು ವಾರಿಪಾಟ’ ಸಿನಿಮಾ ಅಂದುಕೊಂಡಂತೆ ಆಗಿದ್ದರೆ ಕಳೆದ ತಿಂಗಳು ಬಿಡುಗಡೆಯಾಗಬೇಕಿತ್ತು. ಕೊರೊನಾ ಕಾರಣದಿಂದ ಮುಂದೂಡಲಾಗಿತ್ತು.

ಇದೀಗ ಸರ್ಕಾರು ವಾರಿಪಾಟ ಚಿತ್ರತಂಡ  ಹೊಸ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ. ಹೊಸ ಪೋಸ್ಟರ್ ವೊಂದನ್ನು ಹಂಚಿಕೊಳ್ಳುವ ಮೂಲಕ ಮೇ 12ರಂದು ಈ ಚಿತ್ರವನ್ನು ರಿಲೀಸ್ ಮಾಡುವುದಾಗಿ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.

Budget 2022: ಇಲ್ಲಿದೆ ಮುಖ್ಯಾಂಶಗಳು

ಪರಶುರಾಮ್ ನಿರ್ದೇಶನದ ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್, 14 ರೀಲ್ ಪ್ಲಸ್ ಹಾಗೂ ಮಹೇಶ್ ಬಾಬು ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದೆ. ಮಹೇಶ್ ಬಾಬು ಸೇರಿದಂತೆ ಕೀರ್ತಿ ಸುರೇಶ್, ಸೌಮ್ಯ ಮೆನನ್, ವೆನ್ನಿಲ್ಲಾ ಕಿಶೋರ್ ಸುಬ್ಬರಾಜು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಎಸ್ ತಮನ್ ಸಂಗೀತ ಸಂಯೋಜನೆ ನೀಡಿದ್ದಾರೆ.

Sarkaru Vaari Paata Locks Arrival Date – Movie News

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...