alex Certify ಹೊಸ ಮುಖಗಳ ಪ್ರಯೋಗಕ್ಕೆ ಮುಂದಾದ ಬಿಜೆಪಿಗೆ ಬಿಗ್ ಶಾಕ್; 75 ಮಂದಿ ಪೈಕಿ ಕೇವಲ 14 ಅಭ್ಯರ್ಥಿಗಳಿಗೆ ಗೆಲುವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ಮುಖಗಳ ಪ್ರಯೋಗಕ್ಕೆ ಮುಂದಾದ ಬಿಜೆಪಿಗೆ ಬಿಗ್ ಶಾಕ್; 75 ಮಂದಿ ಪೈಕಿ ಕೇವಲ 14 ಅಭ್ಯರ್ಥಿಗಳಿಗೆ ಗೆಲುವು

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗುಜರಾತ್ ಮಾದರಿಯನ್ನು ಅನುಸರಿಸಲು ಮುಂದಾಗಿದ್ದ ಬಿಜೆಪಿ, ಹಿರಿಯ ನಾಯಕರು ಸೇರಿದಂತೆ ಹಳಬರಿಗೆ ಟಿಕೆಟ್ ನಿರಾಕರಿಸಿ 75 ಮಂದಿ ಹೊಸ ಮುಖಗಳನ್ನು ಕಣಕ್ಕಿಳಿಸಿತ್ತು. ಈ ಪೈಕಿ ಕೇವಲ 14 ಮಂದಿ ಗೆಲುವು ಸಾಧಿಸಿದ್ದಾರೆ.

ವಿಧಾನಸಭಾ ಚುನಾವಣೆ ಘೋಷಣೆಗೂ ಮುನ್ನವೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದು, ಆ ಬಳಿಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಸೇರಿದಂತೆ ಕೆಲವರು ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು.

ಟಿಕೆಟ್ ಘೋಷಣೆ ವೇಳೆ ಪಕ್ಷದ ಹಿರಿಯ ನಾಯಕರಾದ ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ ಮೊದಲಾದವರಿಗೆ ಟಿಕೆಟ್ ನಿರಾಕರಿಸಲಾಗಿದ್ದು ಈ ಪೈಕಿ ಶೆಟ್ಟರ್ ಕಾಂಗ್ರೆಸ್ ಸೇರಿ ಆ ಪಕ್ಷದಿಂದ ಸ್ಪರ್ಧಿಸಿದ್ದರು. ಹಳಬರಿಗೆ ಅವಕಾಶ ನಿರಾಕರಿಸಿ ಹೊಸ ಮುಖಗಳಿಗೆ ಮಣೆ ಹಾಕಿದ್ದು ಬಿಜೆಪಿಗೆ ದುಬಾರಿಯಾಗಿ ಪರಿಣಮಿಸಿದೆ ಎನ್ನಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...