ಕೇಂದ್ರ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದ್ದು ಇದನ್ನು ಅನುಷ್ಠಾನಗೊಳಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಈ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಪರ – ವಿರೋಧದ ಅಭಿಪ್ರಾಯಗಳು ಕೇಳಿ ಬರುತ್ತಿರುವ ಮಧ್ಯೆ ಇದನ್ನು ಜಾರಿಗೊಳಿಸಿದ್ದರೆ ಇಂದಿನ ಕಾರಣವನ್ನು ಪ್ರಧಾನಿ ನರೇಂದ್ರ ಮೋದಿಯವರು ಬಿಚ್ಚಿಟ್ಟಿದ್ದಾರೆ.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಬಳಿಕ ವಾರಣಾಸಿಗೆ ಭೇಟಿ ನೀಡಿರುವ ಅವರು ಮೂರು ದಿನಗಳ ವಿಚಾರ ಸಂಕಿರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಶಿಕ್ಷಣವನ್ನು ಸಂಕುಚಿತ ಮನಃಸ್ಥಿತಿ ಮತ್ತು ಚಿಂತನೆಯಿಂದ ಹೊರ ತರುವುದು ಹಾಗೂ 21ನೇ ಶತಮಾನದ ಆಧುನಿಕ ವಿಚಾರಗಳೊಂದಿಗೆ ಇದನ್ನು ಸಂಯೋಜಿಸುವುದು ಇದರ ಹಿಂದಿನ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
ಯುವ ಸಮೂಹವನ್ನು ಕೇವಲ ಪದವಿಗೆ ಮಾತ್ರ ಸೀಮಿತಗೊಳಿಸಬಾರದು ಎಂದು ಹೇಳಿದ ಅವರು, ಶಿಕ್ಷಣದ ಮೂಲಕ ದೇಶವನ್ನು ಮುನ್ನಡೆಸುವ ಮಾನವ ಸಂಪನ್ಮೂಲ ರೂಪಿಸುವ ಕಾರ್ಯವಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ವಿಚಾರ ಸಂಕಿರಣದಲ್ಲಿ 300ಕ್ಕೂ ಅಧಿಕ ಶಿಕ್ಷಣ ತಜ್ಞರು ಪಾಲ್ಗೊಂಡಿದ್ದು ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಕುರಿತು ಚರ್ಚೆ ನಡೆಸುತ್ತಿದ್ದಾರೆ.