ಹೊಸ ವರ್ಷ ಆರಂಭಕ್ಕೂ ಮುನ್ನವೇ ಕೇಂದ್ರ ಸರ್ಕಾರ ಬಡ ಜನತೆಗೆ ಗುಡ್ ನ್ಯೂಸ್ ನೀಡಿದೆ ಆಹಾರ ಭದ್ರತಾ ಕಾಯ್ದೆ ಅಡಿ ದೇಶದ 81.35 ಕೋಟಿ ಬಡವರಿಗೆ ಒಂದು ವರ್ಷಗಳ ಕಾಲ ಉಚಿತವಾಗಿ ಪಡಿತರವನ್ನು ವಿತರಿಸಲು ತೀರ್ಮಾನಿಸಲಾಗಿದೆ.
ಕೊರೊನಾ ಕಾರಣಕ್ಕೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿ ಕಳೆದ 28 ತಿಂಗಳಿಂದ ಉಚಿತ ಪಡಿತರ ವಿತರಣೆ ಮಾಡುತ್ತಿದ್ದು, ಇದರ ಅವಧಿ ಡಿಸೆಂಬರ್ 31ಕ್ಕೆ ಮುಕ್ತಾಯವಾಗುತ್ತಿತ್ತು. ಹೀಗಾಗಿ ಈ ಯೋಜನೆಯನ್ನು ನಿಲ್ಲಿಸಿರುವ ಸರ್ಕಾರ, ಇದನ್ನು ಆಹಾರ ಭದ್ರತಾ ಕಾಯ್ದೆ ಅಡಿ ವಿಲೀನ ಮಾಡಿ ಉಚಿತ ಪಡಿತರ ವಿತರಿಸಲು ತೀರ್ಮಾನಿಸಿದೆ.
ಈಗಾಗಲೇ ಅಕ್ಕಿಯನ್ನು ಕೆಜಿಗೆ ಮೂರು ರೂಪಾಯಿ ಹಾಗೂ ಗೋಧಿಯನ್ನು ಕೆಜಿಗೆ ಎರಡು ರೂಪಾಯಿ ದರದಲ್ಲಿ ವಿತರಿಸಲಾಗುತ್ತಿದ್ದು, ಆದರೆ ಇದರ ಬದಲು ಇನ್ನೂ ಒಂದು ವರ್ಷ ಕಾಲ ಉಚಿತವಾಗಿ ಪಡಿತರ ವಿತರಣೆ ಮಾಡಲು ಹಸಿರು ನಿಶಾನೆ ತೋರಿಸಲಾಗಿದೆ. ಶುಕ್ರವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.