alex Certify ‘ಹ್ಯಾಟ್ರಿಕ್’ ಗೆಲುವು ಸಾಧಿಸುವ ಭಾರತದ ಕನಸು ಭಗ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಹ್ಯಾಟ್ರಿಕ್’ ಗೆಲುವು ಸಾಧಿಸುವ ಭಾರತದ ಕನಸು ಭಗ್ನ

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ನಲ್ಲಿ ಭಾರತ ಈಗಾಗಲೇ ಎರಡು ಗೆಲುವುಗಳನ್ನು ದಾಖಲಿಸಿದ್ದು, ಭಾನುವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲೂ ಗೆಲವು ಸಾಧಿಸಿ ಹ್ಯಾಟ್ರಿಕ್ ಸಾಧನೆ ಮಾಡುವ ಭಾರತ ತಂಡದ ಕನಸು ಭಗ್ನವಾಗಿದೆ.

ದಕ್ಷಿಣ ಆಫ್ರಿಕಾ ತಂಡದ ಮಾರಕ ಬೌಲಿಂಗ್ ದಾಳಿ ಹಾಗೂ ದಿಟ್ಟ ಬ್ಯಾಟಿಂಗ್ ಎದುರು ಭಾರತ ಮಣಿದಿದ್ದು, ಐದು ವಿಕೆಟ್ ಗಳ ಅಂತರದಿಂದ ದಕ್ಷಿಣ ಆಫ್ರಿಕಾ ಜಯ ಸಾಧಿಸಿದೆ.

ಈ ಗೆಲುವಿನಿಂದಾಗಿ ದಕ್ಷಿಣ ಆಫ್ರಿಕಾ ಸೂಪರ್ 12 ಹಂತದ ಗ್ರೂಪ್ 2 ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಭಾರತ ಎರಡನೇ ಸ್ಥಾನಕ್ಕೆ ಕುಸಿದಿದೆ. ನವೆಂಬರ್ 2ರ ಬುಧವಾರದಂದು ಭಾರತ, ಬಾಂಗ್ಲಾದೇಶವನ್ನು ಎದುರಿಸಲಿದ್ದು, ಅಡಿಲೇಡ್ ನಲ್ಲಿ ಈ ಪಂದ್ಯ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...