
ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು ತಮ್ಮ 60ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಅಭಿಮಾನಿಗಳಿಂದ ಹಾಗೂ ಸಿನಿಮಾ ಕಲಾವಿದರಿಂದ ಸೋಷಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.
ಇಂದು ಶಿವರಾಜ್ ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಹೊಸ ಚಿತ್ರದ ಟೈಟಲ್ ಹಾಗೂ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಲಾಗಿದೆ. ‘ಸತ್ಯಮಂಗಳ’ ಎಂಬ ಹೆಸರಿನ ಈ ಸಿನಿಮಾಗೇ ಲೋಹಿತ್ ಎಚ್. ಆಕ್ಷನ್ ಕಟ್ ಹೇಳಲಿದ್ದು, ಕೃಷ್ಣ ಸಾರ್ಥಕ್ ನಿರ್ಮಾಣ ಮಾಡಲಿದ್ದಾರೆ. ಶಿವರಾಜ್ಕುಮಾರ್ ಅವರ ಮುಂಬರುವ ಸಾಕಷ್ಟು ಚಿತ್ರಗಳ ಪೋಸ್ಟರ್ ಗಳು ರಿಲೀಸ್ ಆಗಲಿದ್ದು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ 127ನೇ ಚಿತ್ರವು ಈಗಾಗಲೇ ಘೋಷಣೆಯಾಗಿದೆ. ಸಚಿನ್ ರವಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರಲಿದ್ದು, ಟೈಟಲ್ ಅನೌನ್ಸ್ ಮಾಡಲು ನಿರ್ದೇಶಕರು ಸಜ್ಜಾಗಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಯಾವ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಕುತೂಹಲ ಪ್ರೇಕ್ಷಕರಲ್ಲಿ ಮೂಡಿದೆ.
