alex Certify ದೇವರ ದರ್ಶನಕ್ಕೆ ಬಂದ ವ್ಯಕ್ತಿ ಕುಸಿದು ಬಿದ್ದು ಸಾವು…..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇವರ ದರ್ಶನಕ್ಕೆ ಬಂದ ವ್ಯಕ್ತಿ ಕುಸಿದು ಬಿದ್ದು ಸಾವು…..!

ಮಧ್ಯಪ್ರದೇಶ- ಇತ್ತೀಚಿನ ದಿನಗಳಲ್ಲಿ ಇದ್ದಕ್ಕಿದ್ದ ಹಾಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಕಾರ್ಯಕ್ರಮಗಳಲ್ಲಿ ಭಾಗಿಯಾದ ಸಮಯದಲ್ಲಿ, ರಾತ್ರಿ ಮಲಗಿದ್ದ ವೇಳೆಯಲ್ಲಿ, ಜಿಮ್ ಮಾಡುವ ವೇಳೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿವೆ. ಇದೀಗ ಇಲ್ಲೊಂದು ಪ್ರಕರಣದಲ್ಲಿ ದೇವರನ್ನು ನೋಡಲು ಬಂದ ವ್ಯಕ್ತಿ ದೇವರ ಪಾದ ಸೇರಿದ್ದಾರೆ.

ಹೌದು, ಉತ್ತರಪ್ರದೇಶದ ಕಟ್ನಿಯಲ್ಲಿನ ಸಾಯಿಬಾಬಾ ದೇವಾಲಯದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿ ದೇವರಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದ ಸಂದರ್ಭ ದೇವರಿಗೆ ನಮಸ್ಕಾರ ಮಾಡಲು ಮುಂದಾಗಿದ್ದಾರೆ. ತಲೆ ಬಾಕಿ ನಮಸ್ಕಾರ ಮಾಡುವಾಗಲೇ ಪ್ರಾಣ ಪಕ್ಷಿ ಹಾರಿ ಹೋಗಿದೆ. ಕುಸಿದು ಬಿದ್ದಿದ್ದ ವ್ಯಕ್ತಿಯನ್ನು ಜನ ಆಸ್ಪತ್ರೆಗೆ ಕರೆದೊಯ್ಯಬೇಕು ಎಂದು ಅಂದುಕೊಳ್ಳುವ ಕ್ಷಣಾರ್ಧದಲ್ಲೇ ಪ್ರಾಣ ಹೋಗಿದೆ.

ಇನ್ನು ಇವರು ಕುಸಿದು ಬಿದ್ದ ನಂತರ ಜನ ಒಂದು ಕ್ಷಣ ಏನಾಯ್ತು ಎಂದುಕೊಂಡಿದ್ದಾರೆ. ವ್ಯಕ್ತಿಯನ್ನು ಎಬ್ಬಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ವ್ಯಕ್ತಿ ಆಗಲೇ ಪ್ರಾಣ ಬಿಟ್ಟಿದ್ದರು. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...