alex Certify ‌ʼಕಾಂತಾರʼ ವೀಕ್ಷಿಸಲು ಬಯಸಿದವರಿಗೆ ಇಲ್ಲಿದೆ ಮತ್ತೊಂದು ಗುಡ್‌ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‌ʼಕಾಂತಾರʼ ವೀಕ್ಷಿಸಲು ಬಯಸಿದವರಿಗೆ ಇಲ್ಲಿದೆ ಮತ್ತೊಂದು ಗುಡ್‌ ನ್ಯೂಸ್

ರಿಷಬ್ ಶೆಟ್ಟಿ ಅಭಿನಯಿಸಿ, ನಿರ್ದೇಶಿಸಿರುವ ‘ಕಾಂತಾರ’ ಚಿತ್ರ ಬಿಡುಗಡೆಯಾಗಿ 40 ದಿನಗಳು ಕಳೆದ್ರೂ ಪ್ರೇಕ್ಷಕರನ್ನು ಸೆಳೆಯುತ್ತಲೇ ಇದೆ. ಚಿತ್ರ ಈವರೆಗೆ 400 ಕೋಟಿ ರೂಪಾಯಿಗಳನ್ನು ಗಳಿಕೆ ಮಾಡಿ  ಹೊಸ ದಾಖಲೆ ಸೃಷ್ಟಿಸಿದೆ. ಇದೀಗ ಕಾಂತಾರಾ ವೀಕ್ಷಿಸಲು ಬಯಸಿರುವ ಅಭಿಮಾನಿಗಳಿಗೆ ಮತ್ತೊಂದು ಗುಡ್‌ ನ್ಯೂಸ್‌ ಇಲ್ಲಿದೆ.

ʼಕಾಂತಾರʼ ಚಿತ್ರ ಜಗತ್ತಿನಾದ್ಯಂತ ಡಿಜಿಟಲ್ ಪ್ರೀಮಿಯರ್ ಅಮೆಜಾನ್‌ ಪ್ರೈಂ ಮೂಲಕ ಬಿಡುಗಡೆಯಾಗಿದೆ. ‌ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರ್ ನಿರ್ಮಾಣದ ಈ ಚಿತ್ರದ ಕಥೆ ರಚನೆ ಹಾಗೂ ನಿರ್ದೇಶನವನ್ನು ರಿಷಬ್ ಶೆಟ್ಟಿ ಮಾಡಿದ್ದಾರೆ. ಸಪ್ತಮಿ ಗೌಡ, ಕಿಶೋರ್ ಕುಮಾರ್, ಅಚ್ಯುತ್ ಕುಮಾರ್ ಮುಂತಾದ ಪ್ರಮುಖರು ಚಿತ್ರದಲ್ಲಿ ಅಭಿನಯಿಸಿದ್ದು ರಿಷಬ್ ಶೆಟ್ಟಿ ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಹೃದಯವನ್ನು ಗೆದ್ದಿರುವ ಕಾಂತಾರ ಚಿತ್ರವನ್ನು ಇಂದಿನಿಂದ ಮನೆಯಲ್ಲೇ ಕುಳಿತು ವೀಕ್ಷಿಸಬಹುದಾಗಿದೆ. ಭಾರತ ಸೇರಿದಂತೆ 240 ದೇಶ, ಪ್ರಾಂತ್ಯಗಳಲ್ಲಿನ ಪ್ರೈಂ ಸದಸ್ಯರು ಚಿತ್ರವನ್ನು ಆನ್ಲೈನ್ನಲ್ಲಿ ವೀಕ್ಷಿಸಬಹುದು. ಕನ್ನಡ, ತೆಲುಗು, ಮಲಯಾಳಂ ಹಾಗೂ ತಮಿಳು ಭಾಷೆಗಳಲ್ಲಿ ಚಿತ್ರವನ್ನು ಆನಂದಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...