alex Certify ‌ʼವರ್ಗಾವಣೆʼ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಂಕ್ರಾಂತಿ ಸಂದರ್ಭದಲ್ಲಿ ಭರ್ಜರಿ ಗುಡ್‌ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‌ʼವರ್ಗಾವಣೆʼ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಂಕ್ರಾಂತಿ ಸಂದರ್ಭದಲ್ಲಿ ಭರ್ಜರಿ ಗುಡ್‌ ನ್ಯೂಸ್

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಸಂಕ್ರಾಂತಿ ಸಂದರ್ಭದಲ್ಲಿ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಕೋರಿಕೆ ಹಾಗೂ ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್‌ ವೇಳಾಪಟ್ಟಿಯನ್ನು ಶುಕ್ರವಾರದಂದು ಬಿಡುಗಡೆ ಮಾಡಲಾಗಿದೆ.

ವೇಳಾಪಟ್ಟಿ ಅನುಸಾರ ವರ್ಗಾವಣೆ ಕೌನ್ಸೆಲಿಂಗ್‌ ಬೆಂಗಳೂರಿನ ಕೆಂಪೇಗೌಡ ರಸ್ತೆಯಲ್ಲಿರುವ ಶಿಕ್ಷಕರ ಸದನದಲ್ಲಿ ಜನವರಿ 18 ರಿಂದ ಜನವರಿ 25 ರವರೆಗೆ ನಡೆಯಲಿದ್ದು,  ಅಂತಿಮ ಆದ್ಯತಾ ಪಟ್ಟಿಯಲ್ಲಿರುವ ಶಿಕ್ಷಕರು ತಮ್ಮ ಮೂಲ ಅರ್ಜಿ ಹಾಗೂ ಕೋರಿಕೆಯ ಆದ್ಯತೆಯ ದಾಖಲೆಗಳೊಂದಿಗೆ ನಿಗದಿತ ದಿನಾಂಕ ಹಾಗೂ ಸಮಯಕ್ಕೆ ಹಾಜರಾಗಬೇಕಿದೆ.

ಜನವರಿ 18 ರಿಂದ ಜನವರಿ 24 ರ ವರೆಗೆ ಅಂತರ್‌ ಘಟಕ ವಿಭಾಗದ ಹೊರಗಿನ ಕೋರಿಕೆಯ ಕೌನ್ಸೆಲಿಂಗ್‌ ಹಾಗೂ ಜನವರಿ 25 ರಂದು ಅಂತರ್‌ ಘಟಕ ವಿಭಾಗದ ಪರಸ್ಪರ ವರ್ಗಾವಣೆಯ ಕೌನ್ಸೆಲಿಂಗ್‌ ನಡೆಯಲಿದ್ದು, ಶಿಕ್ಷಕರು ತಮ್ಮ ಭಾವಚಿತ್ರವಿರುವ ಗುರುತಿನ ಚೀಟಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಹಾಜರಾಗಲು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...