ಮೈಸೂರು: ಆಟೋ ಪಲ್ಟಿಯಾಗಿ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾದ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ನಡೆದಿದೆ.
ಶಾಲೆಗೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಆಟೋ ಪಲ್ಟಿಯಾಗಿದ್ದು, 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಟಿ.ನರಸೀಪುರ ತಾಲೂಕಿನ ಆಲಗೂಡು ಗ್ರಾಮದ ಕೆಲವು ಊರುಗಳಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದಂತ ಆಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸದ್ಯ ಗಾಯಾಳು ವಿದ್ಯಾರ್ಥಿಗಳನ್ನು ಟಿ.ನರಸೀಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.