alex Certify 1ನೇ ತರಗತಿ ಪ್ರವೇಶಕ್ಕೆ ಆರು ವರ್ಷ ಕಡ್ಡಾಯ; 2025 ರಿಂದ ಹೊಸ ನಿಯಮ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

1ನೇ ತರಗತಿ ಪ್ರವೇಶಕ್ಕೆ ಆರು ವರ್ಷ ಕಡ್ಡಾಯ; 2025 ರಿಂದ ಹೊಸ ನಿಯಮ ಜಾರಿ

ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷ ಕಡ್ಡಾಯವಾಗಿರಬೇಕು ಎಂಬ ನಿಯಮವನ್ನು ರಾಜ್ಯ ಸರ್ಕಾರ 2023 – 24 ರ ಶೈಕ್ಷಣಿಕ ಸಾಲಿನಿಂದ ಜಾರಿಗೊಳಿಸಲು ತೀರ್ಮಾನಿಸಿತ್ತಾದರೂ ಇದೀಗ ಇದನ್ನು ತಿದ್ದುಪಡಿ ಮಾಡಲಾಗಿದ್ದು, 2025 – 26 ನೇ ಸಾಲಿನಿಂದ ಇದು ಅನ್ವಯವಾಗಲಿದೆ.

ಸರ್ಕಾರದ ಈ ತೀರ್ಮಾನದಿಂದಾಗಿ ಪ್ರಸ್ತುತ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ಶಿಕ್ಷಣ ಪಡೆಯುತ್ತಿರುವ ಮಕ್ಕಳ 1ನೇ ತರಗತಿ ಪ್ರವೇಶಕ್ಕೆ ಯಾವುದೇ ಅಡ್ಡಿ ಇಲ್ಲದಂತಾಗಿದೆ. ಈ ಹಿಂದೆ ಸರ್ಕಾರ 2023 – 24ನೇ ಶೈಕ್ಷಣಿಕ ಸಾಲಿನಿಂದ ನಿಯಮವನ್ನು ಜಾರಿಗೊಳಿಸಲು ಮುಂದಾಗಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು.

ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷವಾಗಿರಬೇಕೆಂಬ ಕಡ್ಡಾಯ ನಿಯಮವನ್ನು ಈಗ ಜಾರಿಗೊಳಿಸಿದರೆ ಪ್ರಸ್ತುತ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ಶಿಕ್ಷಣ ಪಡೆಯುತ್ತಿರುವ ಮಕ್ಕಳ ಒಂದನೇ ತರಗತಿ ಪ್ರವೇಶಕ್ಕೆ ಅಡ್ಡಿಯಾಗುತ್ತದೆ ಎಂಬ ಆತಂಕ ವ್ಯಕ್ತವಾಗಿತ್ತು. ಸರ್ಕಾರ ತನ್ನ ಆದೇಶವನ್ನು ತಿದ್ದುಪಡಿ ಮಾಡಿರುವ ಕಾರಣ ಈಗ ಸಮಸ್ಯೆ ನಿವಾರಣೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...