ಜ್ಯೂನಿಯರ್ ಎನ್ ಟಿ ಆರ್ ಹಾಗೂ ರಾಮ್ ಚರಣ್ ಅಭಿನಯದ ಬಹುನಿರೀಕ್ಷೆಯ ‘ಆರ್ ಆರ್ ಆರ್’ ಚಿತ್ರದ ‘ದೋಸ್ತಿ’ ಹಾಡನ್ನು ನಿನ್ನೆ ಲಹರಿ ಮ್ಯೂಸಿಕ್ ಟಿ ಸಿರೀಸ್ ಯೂಟ್ಯೂಬ್ ಚಾನೆಲ್ ನಲ್ಲಿ 5 ಭಾಷೆಗಳಲ್ಲಿ ಬಿಡುಗಡೆ ಮಾಡಲಾಗಿತ್ತು ಈ ಹಾಡು ಎಲ್ಲಾ ಭಾಷೆಯ ಪ್ರೇಕ್ಷಕರ ಗಮನ ಸೆಳೆದಿದೆ. ಕನ್ನಡ ಗಾನಪ್ರಿಯರಿಂದಲೂ ಈ ಹಾಡಿಗೆ ಸಾಕಷ್ಟು ಮೆಚ್ಚುಗೆ ದೊರೆತಿದೆ. ಎಂಎಂ ಕೀರವಾಣಿ ಸಂಗೀತಕ್ಕೆ ಗಾನಪ್ರಿಯರು ಫಿದಾ ಆಗಿದ್ದಾರೆ ಕನ್ನಡ ವರ್ಷನ್ ನ ಈ ಮ್ಯೂಸಿಕ್ ವಿಡಿಯೋ 1 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ.
400 ಮಿಲಿಯನ್ ವೀಕ್ಷಣೆ ಪಡೆದ ‘ರಾಮುಲೋ ರಾಮುಲಾ’ ಹಾಡು
ಯಾಜಿನ್ ನಿಜಾರ್ ಈ ಹಾಡಿಗೆ ಧ್ವನಿಗೂಡಿಸಿದ್ದು ಈ ಹಾಡಿಗೆ ಕೆಲವರು ವಿರೋಧ ಕೂಡ ವ್ಯಕ್ತಪಡಿಸಿದ್ದಾರೆ ನಮ್ಮ ಕನ್ನಡದಲ್ಲೇ ದೊಡ್ಡ ಗಾಯಕರಿದ್ದಾರೆ ವಿಜಯ್ ಪ್ರಕಾಶ್ ಧ್ವನಿಯಲ್ಲಿ ಈ ಹಾಡು ಮೂಡಿಬಂದಿದ್ದರೇ ಚೆನ್ನಾಗಿರುತ್ತಿತ್ತು ಎಂದು ಕಮೆಂಟ್ಸ್ ಮಾಡಿದ್ದಾರೆ.