alex Certify 1 ಮಿಲಿಯನ್ ವೀಕ್ಷಣೆ ಪಡೆದ ‘ಪುಷ್ಪ’ ಚಿತ್ರದ ಕನ್ನಡ ಲಿರಿಕಲ್ ಸಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

1 ಮಿಲಿಯನ್ ವೀಕ್ಷಣೆ ಪಡೆದ ‘ಪುಷ್ಪ’ ಚಿತ್ರದ ಕನ್ನಡ ಲಿರಿಕಲ್ ಸಾಂಗ್

ಸುಕುಮಾರ್ ನಿರ್ದೇಶನದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಪುಷ್ಪ’ ಪ್ರೇಕ್ಷಕರಲ್ಲಿ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ನಿನ್ನೆ ಅದಿತ್ಯ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ‘ಪುಷ್ಪ’ ಚಿತ್ರದ ಮೊದಲ ಹಾಡನ್ನು 5 ಭಾಷೆಗಳಲ್ಲಿ ಬಿಡುಗಡೆ ಮಾಡಲಾಗಿದೆ. ಕನ್ನಡದಲ್ಲಿ “ಜೋಕೆ ಜೋಕೆ ಮೇಕೆ ಹೆಬ್ಬುಲಿ ಹಾಕಿದೆ ಕೇಕೆ’ ಎಂಬ ಹಾಡಿಗೆ ವಿಜಯ್ ಪ್ರಕಾಶ್ ಧ್ವನಿಗೂಡಿಸಿದ್ದು, ಈ ಹಾಡು 1 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದು ಸೂಪರ್ ಡೂಪರ್ ಹಿಟ್ ಆಗಿದೆ.

ಬಡವರು, ಮಧ್ಯಮ ವರ್ಗದವರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಮುದ್ರಾಂಕ ಶುಲ್ಕ ಇಳಿಕೆ

ಸ್ಯಾಂಡಲ್ ವುಡ್ ನ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರ ಗಾಯನ ಹಾಗೂ ದೇವಿಶ್ರೀ ಪ್ರಸಾದ್ ಸಂಗೀತಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ. ಕನ್ನಡದಲ್ಲಿ ವರದರಾಜ್ ಚಿಕ್ಕಬಳ್ಳಾಪುರ ಅವರ ಸಾಹಿತ್ಯವಿದೆ. 5 ಭಾಷೆಗಳಲ್ಲೂ ಈ ಹಾಡು ಸಾಕಷ್ಟು ಜನಪ್ರಿಯತೆ ಪಡೆದಿದೆ. ಕ್ರಿಸ್ಮಸ್ ಹಬ್ಬದಂದು ತೆರೆಮೇಲೆ ಬರಲಿರುವ ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...