ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಸಿಂಪಲ್ ಸುನಿ ನಿರ್ದೇಶನದ ‘ಸಖತ್’ ಚಿತ್ರದ ಪ್ರೇಮಕೆ ಕಣ್ಣಿಲ್ಲ ಎಂಬ ವಿಡಿಯೋ ಹಾಡನ್ನು ಮೊನ್ನೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿತ್ತು. ಈ ಹಾಡು ಇದೀಗ 1 ಮಿಲಿಯನ್ ವೀಕ್ಷಣೆ ಪಡೆದು ಭರ್ಜರಿಯಾಗಿ ಮುನ್ನುಗ್ಗುತ್ತಲೇ ಇದೆ.
ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ವಿಚಾರ: ಮಹತ್ವದ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ
ಪಂಚಮ್ ಜೀವ ಧ್ವನಿಯಲ್ಲಿ ಈ ಹಾಡು ತುಂಬಾ ಸೊಗಸಾಗಿ ಮೂಡಿಬಂದಿದ್ದು, ಜಯಂತ್ ಕಾಯ್ಕಿಣಿ ಸಾಹಿತ್ಯವಿದೆ. ಜುಡಾ ಸ್ಯಾಂಡಿ ಸಂಗೀತ ಸಂಯೋಜನೆ ನೀಡಿದ್ದಾರೆ.
ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಿಶ್ವಿಕಾ ನಾಯ್ಡು ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದು, ವೆಂಕಟ್ ಕೋನಂಕಿ ಮತ್ತು ಸುಪ್ರೀತ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.