alex Certify 1-8 ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ SC/ST-OBC-ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

1-8 ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ SC/ST-OBC-ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಿಗ್ ಶಾಕ್

ಒಂದರಿಂದ ಎಂಟನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ಈ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.

ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಅಡಿ ಒಂದರಿಂದ ಎಂಟನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತ ಶಿಕ್ಷಣ ಲಭ್ಯವಿರುವ ಕಾರಣ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದ್ದು, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸಿಗಲಿದೆ.

ಕೇಂದ್ರ ಸರ್ಕಾರದ ಈ ತೀರ್ಮಾನಕ್ಕೆ ಈಗ ಪ್ರತಿಪಕ್ಷಗಳ ನಾಯಕರಿಂದ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದು, ಬಡ ವಿದ್ಯಾರ್ಥಿಗಳ ಹಣ ಕಸಿದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಏನು ಲಾಭ ಮಾಡಿಕೊಳ್ಳುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...