alex Certify ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ 1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ ಪೊಲೀಸರು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ 1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ ಪೊಲೀಸರು.!

ಬೀದರ್ : ಸಿನಿಮಾ ಸ್ಟೈಲಲ್ಲಿ ಖದೀಮರನ್ನು ಚೇಸ್ ಮಾಡಿದ ಪೊಲೀಸರು 1 ಕೋಟಿ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಗಾಂಜಾಕೋರರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಕಾರ್ಯ ಪ್ರವೃತ್ತರಾದ ಪೊಲೀಸರು ಕೋಟ್ಯಂತರ ರೂ. ಮೌಲ್ಯದ ಗಾಂಜಾವನ್ನು ಬೀದರ್ ಪೊಲೀಸರು ಜಪ್ತಿ ಮಾಡಿದ್ದಾರೆ.

ಸಿನಿಮಿಯ ಶೈಲಿಯಲ್ಲಿ ಕಾರನ್ನು ಚೇಸ್ ಮಾಡಿ 1.18 ಕೋಟಿ ರೂ. ಮೌಲ್ಯದ 118 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ. ಪೊಲೀಸರನ್ನು ನೋಡುತ್ತಿದ್ದಂತೆ ಆರೋಪಿಗಳು ಓಡಲು ಯತ್ನಿಸಿದ್ದಾರೆ. ಆದರೂ ಪೊಲೀಸರು ಬೆನ್ನಟ್ಟಿದ್ದಾರೆ. ಬಳಿಕ ಕಾರು ಬಿಟ್ಟ ಇಬ್ಬರು ಆರೋಪಿಗಳು ಸ್ಕಳದಿಂದ ಕಾಲ್ಕಿತ್ತಿದ್ದಾರೆ. ಸದ್ಯ, ಗಾಂಜಾ ವಶಪಡಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...