alex Certify BIG NEWS : ಗಣರಾಜ್ಯೋತ್ಸವ ಆಚರಣೆಗೆ ಪ್ರತಿ ಜಿಲ್ಲೆಗೆ 1 ಲಕ್ಷ ಅನುದಾನ ಬಿಡುಗಡೆ ; ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಗಣರಾಜ್ಯೋತ್ಸವ ಆಚರಣೆಗೆ ಪ್ರತಿ ಜಿಲ್ಲೆಗೆ 1 ಲಕ್ಷ ಅನುದಾನ ಬಿಡುಗಡೆ ; ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಜ.26 ರಂದು ನಡೆಯಲಿರುವ ಗಣರಾಜ್ಯೋತ್ಸವ ಆಚರಣೆಗೆ ಪ್ರತಿ ಜಿಲ್ಲೆಗೆ 1 ಲಕ್ಷ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ರಾಜ್ಯ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭವನ್ನು ಬೆಂಗಳೂರು ನಗರದಲ್ಲಿ ದಿನಾಂಕ:26.01.2024ರಂದು ಏರ್ಪಡಿಸುವ ನಿಮಿತ್ತ ಬೆಂಗಳೂರು ನಗರ ಜಿಲ್ಲೆಗೆ ರೂ.50.00 ಲಕ್ಷಗಳನ್ನು (ರೂಪಾಯಿ ಐವತ್ತು ಲಕ್ಷಗಳು ಮಾತ್ರ) ಜಿಲ್ಲಾಧಿಕಾರಿ, ಬೆಂಗಳೂರು ನಗರ ಜಿಲ್ಲೆ ಇವರಿಗೆ ಬಿಡುಗಡೆ ಮಾಡಲಾಗಿದೆ.

ಮುಂದುವರೆದು, ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭವನ್ನು ಆಚರಿಸುವ ಸಂಬಂಧ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದಲ್ಲಿನ 30 ಜಿಲ್ಲೆಗಳಲ್ಲಿ, ಪ್ರತಿ ಜಿಲ್ಲೆಗೆ ರೂ.1,00,000/- (ರೂಪಾಯಿ ಒಂದು ಲಕ್ಷ ಮಾತ್ರ)ರಂತೆ ಒಟ್ಟು ರೂ.30,00,000/- (ರೂಪಾಯಿ ಮೂವತ್ತು ಲಕ್ಷಗಳು ಮಾತ್ರ) ಮೊತ್ತವನ್ನು ಹಾಗೂ 31 ಜಿಲ್ಲೆಗಳಲ್ಲಿನ 232 ತಾಲ್ಲೂಕುಗಳಲ್ಲಿ, ಪ್ರತಿ ತಾಲ್ಲೂಕಿಗೆ ರೂ.20,000/- (ರೂಪಾಯಿ ಇಪ್ಪತ್ತು ಸಾವಿರಗಳು ಮಾತ್ರ)ರಂತೆ ಒಟ್ಟು ರೂ.46,40,000/- (ರೂಪಾಯಿ ನಲವತ್ತಾರು ಲಕ್ಷ ನಲ್ವತ್ತು ಸಾವಿರಗಳು ಮಾತ್ರ) ಮೊತ್ತವನ್ನು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ.

ಈ ಮೊತ್ತವನ್ನು 2024-25ನೇ ಸಾಲಿನ ಲೆಕ್ಕ ಶೀರ್ಷಿಕೆ:2070-00-115-1-01-051 ರಡಿಯಲ್ಲಿ ಒದಗಿಸಿರುವ ಅನುದಾನದಿಂದ ಭರಿಸತಕ್ಕದ್ದು.ಜಿಲ್ಲಾಧಿಕಾರಿಗಳು ಎ.ಸಿ.ಬಿಲ್ಲಿನಲ್ಲಿ ಹಣವನ್ನು ಪಡೆಯಲು ಅಧಿಕಾರವನ್ನು ಹೊಂದಿದ್ದು, ಹಣವನ್ನು ಪಡೆದ ದಿನಾಂಕದಿಂದ ಒಂದು ತಿಂಗಳೊಳಗಾಗಿ ಮಹಾಲೇಖಪಾಲರಿಗೆ ಎನ್.ಡಿ.ಸಿ.ಬಿಲ್ಲನ್ನು ಕಳುಹಿಸತಕ್ಕದ್ದು, ಅಲ್ಲದೆ ಲೆಕ್ಕ ಪತ್ರಗಳನ್ನು ಪೂರ್ಣಗೊಳಿಸಿ, ಕರ್ನಾಟಕ ಆರ್ಥಿಕ ಸಂಹಿತೆಯಲ್ಲಿನ 62(ಬಿ) ನಮೂನೆಯ ವಿವರ ಪತ್ರವನ್ನು ಸರ್ಕಾರಕ್ಕೆ ಒಂದು ತಿಂಗಳೊಳಗಾಗಿ ತಪ್ಪದೇ ಕಳುಹಿಸತಕ್ಕದ್ದು ಎಂದು   ಸರ್ಕಾರದ ಅಧೀನ ಕಾರ್ಯದರ್ಶಿಗಳು  ಹೊರಡಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...