ದಕ್ಷಿಣ ಹಾಗೂ ಪೂರ್ವ ರೈಲ್ವೆಯಲ್ಲಿ ಉದ್ಯೋಗವಕಾಶ ಇದ್ದು ಆಸಕ್ತರು ಗಮನಿಸಬೇಕಾಗಿದೆ. ರೈಲ್ವೇ ಇಲಾಖೆಯಲ್ಲಿ ಹಂತ 1 ಮತ್ತು 2 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ ಇಲಾಖೆ. ಪೂರ್ವ ರೈಲ್ವೆ ಇಲಾಖೆಯಲ್ಲಿ ಸುಮಾರು 3,115 ಹುದ್ದೆಗಳು ಖಾಲಿ ಇವೆ. ದಕ್ಷಿಣ ರೈಲ್ವೇ ನೇಮಕಾತಿಗೆ ಅಕ್ಟೋಬರ್ 29 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ರೆ, ಪೂರ್ವ ರೈಲ್ವೇ ನೇಮಕಾತಿಗೆ ಅರ್ಜಿ ಸಲ್ಲಿಸಲು ನವೆಂಬರ್ 8 ಕೊನೆಯ ದಿನವಾಗಿದೆ.
ಹಂತ 1ರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಅಥವಾ ಐಟಿಐ ಅಥವಾ ಎನ್‌ಸಿವಿಟಿ ನೀಡಿದ ಸಮಾನ ಅಥವಾ ರಾಷ್ಟ್ರೀಯ ಅಪ್ರೆಂಟಿಸ್ ಶಿಪ್ ಪ್ರಮಾಣಪತ್ರವನ್ನು ಉತ್ತೀರ್ಣರಾಗಿರಬೇಕು.
ಹಂತ 2ರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12 ನೇ ತರಗತಿ ಅಥವಾ ಅದಕ್ಕೆ ಸಮಾನ ಪರೀಕ್ಷೆಯಲ್ಲಿ ಒಟ್ಟಾರೆಯಾಗಿ ಶೇಕಡಾ 50 ಕ್ಕಿಂತ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಇನ್ನು ದಕ್ಷಿಣ ರೈಲ್ವೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಕೋಟಾದ ಮೇಲೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದ್ರೆ, ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. ಪೂರ್ವ ರೈಲ್ವೆಯಲ್ಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. ಕನಿಷ್ಠ 50% ಅಂಕಗಳೊಂದಿಗೆ 10ನೇ ತರಗತಿ ಪಾಸ್ ಆಗಿರಬೇಕು. NCVT/SCVT ಸೂಚನೆಯಂತೆ ಸಂಬಂಧಿಸಿದ ವಿಷಯದಲ್ಲಿ ಐಟಿಐ ಪ್ರಮಾಣಪತ್ರವನ್ನು ಹೊಂದಿರಬೇಕು.
ದಕ್ಷಿಣ ರೈಲ್ವೇ ನಲ್ಲಿ ನೇಮಕಾತಿಗೆ ಅರ್ಜಿ ಸಲ್ಲಿಸಲು 18 ರಿಂದ 33 ವರ್ಷದ ಒಳಗಿರಬೇಕು. ಪೂರ್ವ ರೈಲ್ವೇನಲ್ಲಿ ನೇಮಕಾತಿಗಾಗಿ 15 ವರ್ಷದಿಂದ 24 ವರ್ಷಗಳ ಒಳಗಿನ ವಯಸ್ಸಿನವರಾಗಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 500 ರೂ. ನಿಗದಿ ಮಾಡಲಾಗಿದೆ. ಎಸ್‌ಸಿ,ಎಸ್‌ಟಿ, ಮಾಜಿ ಸೈನಿಕ, ಅಂಗವಿಕಲರು, ಮಹಿಳೆ, ತೃತೀಯಲಿಂಗಿ, ಆರ್ಥಿಕವಾಗಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತರಿಗೆ ಸೇರಿದ ಎಲ್ಲಾ ಅಭ್ಯರ್ಥಿಗಳಿಗೆ 250 ರೂ. ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ indianrailways.gov.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು.