ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನ ಮುಟ್ಟಿರುವ ಹಿನ್ನೆಲೆಯಲ್ಲಿ ಜನಸಾಮಾನ್ಯರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ವಾಹನ ತಯಾರಿಕಾ ಕಂಪನಿಗಳು ಈಗ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾಗಿವೆ.
ಎಲೆಕ್ಟ್ರಿಕ್ ವಾಹನಗಳ ಮುಂಚೂಣಿ ಉತ್ಪಾದನಾ ಕಂಪನಿ ಓಲಾ ಎಲೆಕ್ಟ್ರಿಕ್ ಕೇವಲ 10 ತಿಂಗಳ ಅವಧಿಯಲ್ಲಿ ಒಂದು ಲಕ್ಷ ಸ್ಕೂಟರ್ ಗಳನ್ನು ತಯಾರಿಸಿದೆ ಎಂದು ಹೇಳಲಾಗಿದೆ.
ಅಲ್ಲದೆ ಅಕ್ಟೋಬರ್ ತಿಂಗಳೊಂದರಲ್ಲಿಯೇ 20,000 ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಓಲಾ ಮಾರಾಟ ಮಾಡಿದೆ ಕಂಪನಿಯ ಮೂಲಗಳು ತಿಳಿಸಿವೆ.