10 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದವನಿಗೆ ಕ್ಷಮೆ ಎನ್ನುವುದೇ ಇರಬಾರದು: HDK ಆಕ್ರೋಶದ ನುಡಿ 13-10-2022 1:47PM IST / No Comments / Posted In: Karnataka, Latest News, Live News ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಟ್ಯೂಷನ್ ಗೆ ಹೋಗಿದ್ದ 10 ವರ್ಷದ ಶಾಲಾ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ನಡೆದಿತ್ತು. ಈ ಘೋರ ಕೃತ್ಯವನ್ನು ಎಲ್ಲರೂ ತೀವ್ರವಾಗಿ ಖಂಡಿಸುತ್ತಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಹ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಅವರು, ಮಳವಳ್ಳಿಯಲ್ಲಿ ಟ್ಯೂಷನ್ ಗೆ ಬಂದ 10 ವರ್ಷದ ಶಾಲಾ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ. ಇಂತಹ ಪಾತಕ ಕೃತ್ಯವನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ. ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು. ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಹೆತ್ತ ಮಗುವನ್ನು ಕಳೆದುಕೊಂಡು ಶೋಕದಲ್ಲಿರುವ ಆ ಬಾಲಕಿಯ ಪೋಷಕರ ದುಃಖದಲ್ಲಿ ನಾನೂ ಭಾಗಿ ಎಂದಿರುವ ಕುಮಾರಸ್ವಾಮಿಯವರು, ನೂರು ಕಾಲ ಬಾಳಿ ಬದುಕಬೇಕಿದ್ದ ಮಗುವಿನ ದುರ್ಮರಣ ನನಗೆ ಅತೀವ ನೋವುಂಟು ಮಾಡಿದೆ. ಆ ಬಾಲಕಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ಆ ತಂದೆ ತಾಯಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಮಳವಳ್ಳಿಯಲ್ಲಿ ಟ್ಯೂಶನ್ ಗೆ ಬಂದ 10 ವರ್ಷದ ಶಾಲಾ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ. ಇಂಥ ಪಾತಕ ಕೃತ್ಯವನ್ನು ನಾನು ಖಂಡಿಸುತ್ತೇನೆ. 1/3 — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 13, 2022 ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು. 2/3 — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 13, 2022 ಹೆತ್ತ ಮಗುವನ್ನು ಕಳೆದುಕೊಂಡು ಶೋಕದಲ್ಲಿರುವ ಆ ಬಾಲಕಿಯ ಪೋಷಕರ ದುಃಖದಲ್ಲಿ ನಾನೂ ಭಾಗಿ. ನೂರುಕಾಲ ಬಾಳಿ ಬದುಕಬೇಕಿದ್ದ ಮಗುವಿನ ದುರ್ಮರಣ ನನಗೆ ಅತೀವ ನೋವುಂಟು ಮಾಡಿದೆ. ಆ ಬಾಲಕಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ಆ ತಂದೆ ತಾಯಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. 3/3 — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 13, 2022