10 ಹಾಗೂ 12ನೇ ತರಗತಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಪರೀಕ್ಷೆಗಳಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಚಾಟ್ ಜಿಪಿಟಿ ತಂತ್ರಾಂಶದ ಬಳಕೆಯನ್ನು ನಿಷೇಧಿಸಲಾಗಿದೆ.
ಮಂಗಳವಾರದಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿ ಬಿ ಎಸ್ ಇ) ಈ ಕುರಿತಂತೆ ಪ್ರಕಟಣೆ ಹೊರಡಿಸಿದ್ದು, ಮೊಬೈಲ್, ಚಾಟ್ ಜಿಪಿಟಿ ಹಾಗೂ ಇತರೆ ಎಲೆಕ್ಟ್ರಾನಿಕ್ ಸಾಧನಗಳನ್ನು ಪರೀಕ್ಷಾ ಕೊಠಡಿಗೆ ತರಲು ಅನುಮತಿ ಇರುವುದಿಲ್ಲ ಎಂದು ತಿಳಿಸಿದೆ.
ಫೆಬ್ರವರಿ 15ರ ಇಂದಿನಿಂದ 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಆರಂಭವಾಗುತ್ತಿದ್ದು, 10ನೇ ತರಗತಿ ಪರೀಕ್ಷೆ ಮಾರ್ಚ್ 21ಕ್ಕೆ ಹಾಗೂ 12ನೇ ತರಗತಿ ಪರೀಕ್ಷೆ ಏಪ್ರಿಲ್ 5 ಕ್ಕೆ ಮುಕ್ತಾಯಗೊಳ್ಳಲಿದೆ.