
ಬೆಂಗಳೂರು: ಬ್ಯಾಂಕಾಕ್ ನಿಂದ ಅಕ್ರಮವಾಗಿ 10 ಅನಕೊಂಡ ಹಾವುಗಳನ್ನು ಕಳ್ಳ ಸಾಗಾಣೆ ಮಾಡುತ್ತಿದ್ದ ಪ್ರಯಾಣಿಕನೊಬ್ಬನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬ್ಯಾಂಕಾಕ್ ನಿಂದ ಕೆಐಎಗೆ ಬಂದಿಳಿದ ಪ್ರಯಾಣಿಕನ ಲಗೇಜ್ ಬ್ಯಾಗ್ ಗಳನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ವೇಳೆ ಹತ್ತು ಹಳದಿ ಬಣ್ಣದ ಅನಕೊಂಡ ಹಾವುಗಳು ಪತ್ತೆಯಾಗಿವೆ.
ತಕ್ಷಣ ಪ್ರಯಾಣಿಕನನ್ನು ಹಾಗೂ ಹಾವುಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಇದೇ ವೇಳೆ ಹಾವುಗಳನ್ನು ಅರಣ್ಯ ಇಲಾಖೆಗೆ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.
ವನ್ಯಜೀವಿಗಳ ಕಳ್ಳ ಸಾಗಾಣೆ ಆರೋಪದಡಿ ಪ್ರಯಾಣಿಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.