ರಾಜಸ್ಥಾನದ ಚಿತ್ತೋರಗಢ ಸಮೀಪ ನಿಕುಂಬ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ.
ಟ್ರಕ್ ಮತ್ತು ಜೀಪ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಜೀಪ್ ನಲ್ಲಿ ಪ್ರಯಾಣಿಸುತ್ತಿದ್ದ 10 ಮಂದಿ ಸಾವನ್ನಪ್ಪಿದ್ದು, 6 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮೃತರು ಮಧ್ಯಪ್ರದೇಶದ ರಾತ್ಲಮ್ ಜಿಲ್ಲೆಯ ನಿವಾಸಿಗಳು ಎಂದು ಗುರುತಿಸಲಾಗಿದೆ.
ಇನ್ನು ಪ್ರಧಾನಿ ನರೇಂದ್ರ ಮೋದಿ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಸಾಂತ್ವನ ಹೇಳಿ ಮೃತರಿಗೆ ಸಂತಾಪ ಸೂಚಿಸಿದ್ದು, ಗಾಯಗೊಂಡವರ ಚೇತರಿಕೆಗೆ ಹಾರೈಸಿದ್ದಾರೆ.