ನವದೆಹಲಿ: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಗುಡ್ಡಾಪುರ ಗ್ರಾಮದಲ್ಲಿ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದು, ಮೃತರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿ ಸಂಭವಿಸಿರುವುದು ತೀವ್ರ ದುಃಖ ತಂದಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ.
ಮೃತರ ಪ್ರತಿ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರದಿಂದ ಮೃತರ ಕುಟುಂಬಗಳಿಗೆ ತಲಾ ಮೂರು ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.
Deeply saddened by the loss of lives in the accident in the Uttara Kannada district of Karnataka. Condolences to those who lost their loved ones. May the injured recover soon. The local administration is assisting those affected.
An ex-gratia of Rs. 2 lakh from PMNRF would be…
— PMO India (@PMOIndia) January 22, 2025