ಉದಯನಿಧಿ ಕೆನ್ನೆಗೆ ಬಾರಿಸಿದ್ರೆ 10 ಲಕ್ಷ ರೂ. ಬಹುಮಾನ : ಹಿಂದೂ ಸಂಘಟನೆ ಘೋಷಣೆ

ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಕೆನ್ನೆಗೆ ಬಾರಿಸಿದ್ರೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಹಿಂದೂ ಸಂಘಟನೆ ಘೋಷಣೆ ಮಾಡಿದೆ.

ಆಂಧ್ರಪ್ರದೇಶದ ಜನ ಜಾಗರಣ ಸಮಿತಿಯು ಈ ಬಗ್ಗೆ ಪೋಸ್ಟರ್ಗಳನ್ನು ಬಿಡುಗಡೆ ಮಾಡಿದ್ದು, ವಿಜಯವಾಡದ ಹಲವು ಕಡೆ ಪೋಸ್ಟರ್ಗಳನ್ನು ಅಂಟಿಸಲಾಗಿದ್ದು, ಸದ್ಯ ಈ ಪೋಸ್ಟರ್ ಸಿಕ್ಕಾಪಟ್ಟೆ ವೈರಲ್ ಆಗಿದೆ.

ತಮಿಳುನಾಡಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸ್ಟಾಲಿನ್ ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ರೋಗಗಳಿಗೆ ಹೋಲಿಸಿ ವಿವಾದ ಸೃಷ್ಟಿಸಿದ್ದರು. ಸನಾತನ ಧರ್ಮ ಸೊಳ್ಳೆಗಳಿದ್ದಂತೆ, ಡೆಂಗ್ಯೂ ಮತ್ತು ಮಲೇರಿಯಾವನ್ನು ನಿರ್ಮೂಲನೆ ಮಾಡಿದಂತೆ ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿ ದೇಶಾದ್ಯಂತ ಕೋಲಾಹಲ ಎಬ್ಬಿಸಿದೆ. ಇತ್ತೀಚೆಗೆ ಸಚಿವ ಉದಯನಿಧಿ ಸ್ಟಾಲಿನ್ ಅವರ ತಲೆಗೆ 10 ಕೋಟಿ ರೂಪಾಯಿಗಳ ಬಹುಮಾನವನ್ನು ಪರಮಹಂಸ ಆಚಾರ್ಯ ಘೋಷಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read