
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಾಲ್ಕನೇ ಹಂತದಲ್ಲಿದೆ. ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಯುಪಿಯ ಕಾಲೇಜು ಪ್ರಾಂಶುಪಾಲರೊಬ್ಬರು, ವಿದ್ಯಾರ್ಥಿಗಳಿಗೆ ಬಂಪರ್ ಆಫರ್ ನೀಡಿದ್ದಾರೆ. ಕಾಲೇಜಿನಲ್ಲಿ ಓದುತ್ತಿರುವ ಮಕ್ಕಳ, ಪೋಷಕರು ಮತದಾನದ ಹಕ್ಕನ್ನು ಚಲಾಯಿಸಿದರೆ ವಿದ್ಯಾರ್ಥಿಗಳಿಗೆ ಎಕ್ಸ್ಟ್ರಾ 10 ಅಂಕಗಳನ್ನು ನೀಡಲಾಗುತ್ತದೆ ಎಂದು ಘೋಷಿಸಿದ್ದಾರೆ.
ಲಕ್ನೋದ ಕ್ರೈಸ್ಟ್ ಚರ್ಚ್ ಕಾಲೇಜಿನ ಪ್ರಾಂಶುಪಾಲರು ತಮ್ಮ ವಿದ್ಯಾರ್ಥಿಗಳಿಗೆ ಇಂತಹ ವಿನೂತನ ಕೊಡುಗೆ ನೀಡಿದ್ದಾರೆ. ಸದ್ಯ ಯುಪಿಯಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಮತ ಚಲಾಯಿಸುವ ಪೋಷಕರ ಮಕ್ಕಳಿಗೆ ಹೆಚ್ಚು 10 ಅಂಕಗಳನ್ನು ನೀಡುವುದಾಗಿ ಪ್ರಾಂಶುಪಾಲ ರಾಕೇಶ್ ಕುಮಾರ್ ಭರವಸೆ ನೀಡಿದ್ದಾರೆ.
ಈ ವಿನೂತನ ಕೊಡುಗೆ ಕುರಿತು ಮಾತನಾಡಿದ ಪ್ರಾಂಶುಪಾಲ ರಾಕೇಶ್ ಕುಮಾರ್, ಯುಪಿ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸಲು, ಮತದಾರರ ಸಂಖ್ಯೆಯನ್ನು ಹೆಚ್ಚಿಸಲು ಮತ್ತು ವಿದ್ಯಾರ್ಥಿಗಳಿಗೆ ಆರ್ಥಿಕ ಸಂಕಷ್ಟದಲ್ಲಿ ಸಹಾಯ ಮಾಡಲು ಈ ಕೊಡುಗೆ ನೀಡಲಾಗಿದೆ ಎಂದಿದ್ದಾರೆ.
ಹರ್ಷ ಕೊಲೆ ಪ್ರಕರಣ; ಬಂಧನವಾಗಿರುವ ಪ್ರಮುಖ ಆರೋಪಿಗಳ ಕುರಿತು ಇಲ್ಲಿದೆ ಡಿಟೇಲ್ಸ್
ಕಾಲೇಜು ಪ್ರಾಂಶುಪಾಲರು ನೀಡುವ ಈ ಆಫರ್‌ನಿಂದ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಮತದಾನ ಮಾಡಲು ಉತ್ತೇಜನ ನೀಡುತ್ತಾರೆ ಎಂಬುದು ಅಲ್ಲಿನ ಶಿಕ್ಷಕರ ಅಭಿಪ್ರಾಯ. ಆದರೆ ಈ ಆಫರ್ ಹಿಂದೆ ರಾಜಕೀಯ ಕೈವಾಡವಿರಬಹುದು ಎಂಬ ಆರೋಪವೂ ಕೇಳಿ ಬರುತ್ತಿದೆ.