
ಉತ್ತರ ಪ್ರದೇಶದ ಬುಲಂದ್ ಶಹರ್ ಜಿಲ್ಲೆಯಲ್ಲಿ ಬಸ್ ಗೆ ಪಿಕಪ್ ವ್ಯಾನ್ ಡಿಕ್ಕಿಯಾಗಿ 10 ಜನ ಸಾವು ಕಂಡಿದ್ದು, 27 ಮಂದಿ ಗಾಯಗೊಂಡಿದ್ದಾರೆ.
ಉತ್ತರ ಪ್ರದೇಶದ ಬುಲಂದ್ ಶಹರ್ ಜಿಲ್ಲೆಯ ಸೇಲಂಪುರ ಪೊಲೀಸ್ ಠಾಣೆ ಬಳಿ ಪ್ರಯಾಣಿಕರು ತುಂಬಿದ್ದ ಬಸ್ ಮ್ಯಾಕ್ಸ್ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ನಡೆದಿದೆ.
ಭೀಕರ ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದು, 37 ಜನರು ಗಾಯಗೊಂಡಿದ್ದಾರೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್(ಡಿಎಂ), ಹಿರಿಯ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಎಸ್‌ಪಿ) ಮತ್ತು ಇತರ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಾಯಾಳುಗಳನ್ನು ಪ್ರಾದೇಶಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರನ್ನು ಮೀರತ್ ಗೆ ಶಿಫಾರಸು ಮಾಡಲಾಗಿದೆ.
ಮ್ಯಾಕ್ಸ್ ವಾಹನದಲ್ಲಿದ್ದವರು ಗಾಜಿಯಾಬಾದ್ ಕಂಪನಿಯೊಂದರ ಉದ್ಯೋಗಿಗಳಾಗಿದ್ದು, ರಕ್ಷಾ ಬಂಧನ ಹಬ್ಬವನ್ನು ಆಚರಿಸಲು ಅಲಿಘರ್‌ಗೆ ಮರಳುತ್ತಿದ್ದರು. ದುರದೃಷ್ಟವಶಾತ್, ಅವರ ವಾಹನವು ರೋಡ್ ವೇಸ್ ಬಸ್‌ಗೆ ಡಿಕ್ಕಿ ಹೊಡೆದು ಅಪಘಾತ ನಡೆದಿದೆ.
ಅತಿವೇಗವಾಗಿ ಬಂದ ಖಾಸಗಿ ಬಸ್ ಮತ್ತೊಂದು ವಾಹನವನ್ನು ಹಿಂದಿಕ್ಕಲು ಯತ್ನಿಸಿ ಪಿಕಪ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಸೇಲಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ. ಪಿಕಪ್ ಟ್ರಕ್ ನಲ್ಲಿ ಸುಮಾರು 20-22 ಪ್ರಯಾಣಿಕರಿದ್ದರು. ಶಿಕರ್ ಪುರದಿಂದ ಬುಲಂದ್‌ಶಹರ್ ಕಡೆಗೆ ಬಸ್ ತೆರಳುತ್ತಿತ್ತು ಎನ್ನಲಾಗಿದೆ.