ಬೆಂಗಳೂರು : ಹೈಕೋರ್ಟ್ 10 ಸಾವಿರ ದಂಡ ವಿಧಿಸಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.
2022 ರ ಏಪ್ರಿಲ್ 14 ರಂದು ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿನ್ನೆಲೆ ಸಚಿವರಾಗಿದ್ದ ಕೆ ಎಸ್ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಸೇರಿ ಹಲವಾರು ಕಾಂಗ್ರೆಸ್ ನಾಯಕರು ರೇಸ್ ಕೋರ್ಸ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದರು.ಪ್ರತಿಭಟನೆ ವೇಳೆ ರಸ್ತೆ ಸಂಚಾರಕ್ಕೆ ಅಡ್ಡಿಯಾದ ಹಿನ್ನೆಲೆ ಜನಪ್ರತಿನಿಧಿಗಳ ಕೋರ್ಟ್ ಸಿದ್ದರಾಮಯ್ಯ, ಸುರ್ಜೆವಾಲಾ ಸೇರಿದಂತೆ ಹಲವು ನಾಯಕರಿಗೆ ದಂಡ ವಿಧಿಸಲಾಗಿತ್ತು, ಅಲ್ಲದೇ ಸಿಎಂ ಸಿದ್ದರಾಮಯ್ಯಗೆ ಮಾ.6 ರಂದು ಕೋರ್ಟ್ ಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಹೈಕೋರ್ಟ್ ನ ಈ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರತಿಭಟನೆ ಕಾನೂನು ಬದ್ದವಾಗಿದೆ ಎಂದು ಸಿದ್ದರಾಮಯ್ಯ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.