ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಮನೆಯಲ್ಲಿ 10 ಹುಲಿ ಉಗುರಿನ ಪೆಂಡೆಂಟ್ ಪತ್ತೆಯಾಗಿದ್ದು, ಅದು ಅಸಲಿಯೋ..ನಕಲಿಯೋ ತಿಳಿದು ಬರಬೇಕಾಗಿದೆ.
ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ನಿವಾಸಕ್ಕೆ ಅರಣ್ಯಾಧಿಕಾರಿಗಳು ನಿನ್ನೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 10 ಹುಲಿ ಉಗುರಿನ ಪೆಂಡೆಂಟ್ ಪತ್ತೆಯಾಗಿದ್ದು, ಅದು ಅಸಲಿಯೋ..ನಕಲಿಯೋ ಎಂಬುದು ಸ್ಪಷ್ಟವಾಗಿಲ್ಲ. ಮೂಲಗಳ ಪ್ರಕಾರ ಅದು ನಕಲಿ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.ಅವರ ಬಳಿ ಇರುವ ಎಲ್ಲಾ ಲಾಕೆಟ್ಗಳು ಹುಲಿ ಉಗುರಿನ ಮಾದರಿಯ ಲಾಕೆಟ್ಗಳು ಅಷ್ಟೇ ಎನ್ನಲಾಗಿದೆ. ತಮ್ಮ ಬಳಿ ಇದ್ದ 8 ರಿಂದ 10 ಪೆಂಡೆಂಟ್ಗಳನ್ನ ಅವರು ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ನಟ ದರ್ಶನ್ ನಿವಾಸಕ್ಕೆ ಅರಣ್ಯಾಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದ್ದು, ಯಾರೆಲ್ಲಾ ಬಳಿ ಹುಲಿ ಉಗುರು ಇದೆಯೋ ಅವರಿಗೆ ನೋಟಿಸ್ ನೀಡಿ ತಪಾಸಣೆ ನಡೆಸಲಾಗಿದೆ. ನಟ ದರ್ಶನ್ ಹುಲಿ ಉಗುರು ಧರಿಸಿದ್ದ ಫೋಟೋ ವೈರಲ್ ಆಗಿತ್ತು, ಈ ಹಿನ್ನೆಲೆ ವನ್ಯ ಜೀವಿ ಸಂರಕ್ಷಣಾ ಕಾಯಿದೆಯಡಿ ನಟ ದರ್ಶನ್ ವಿರುದ್ಧ ದೂರು ದಾಖಲಾಗಿದೆ.
ಹುಲಿ ಉಗುರು ಪೆಂಡೆಂಟ್ ಧರಿಸಿದ್ದಕ್ಕಾಗಿ ಕನ್ನಡದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಸ್ಯಾಂಡಲ್ ವುಡ್ ನಟ ಹಾಗೂ ಪ್ರಮುಖ ನಾಯಕರಿಗೂ ಸಂಕಷ್ಟ ಎದುರಾಗಿದೆ.
ಹುಲಿ ಉಗುರು ಧರಿಸಿದ ಆರೋಪದ ಮೇರೆಗೆ ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ನಟ ಜಗ್ಗೇಶ್, ರಾಕ್ ಲೈನ್ ವೆಂಕಟೇಶ್ ವಿರುದ್ಧ ಕೂಡ ದೂರು ದಾಖಲಾಗಿದೆ. ಅಲ್ಲದೇ ವಿನಯ್ ಗುರೂಜಿ ಅವರು ಹುಲಿ ಚರ್ಮದ ಮೇಲೆ ಕುಳಿತಿದ್ದಾರೆ ಎಂದು ಆರೋಪಿಸಲಾಗಿದೆ.