alex Certify 100 ಮಿಲಿಯನ್ ವೀಕ್ಷಣೆ ಪಡೆದ ‘ಸರ್ಕಾರು ವಾರಿಪಾಟ’ ಚಿತ್ರದ ಲಿರಿಕಲ್ ಸಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

100 ಮಿಲಿಯನ್ ವೀಕ್ಷಣೆ ಪಡೆದ ‘ಸರ್ಕಾರು ವಾರಿಪಾಟ’ ಚಿತ್ರದ ಲಿರಿಕಲ್ ಸಾಂಗ್

ಪರಶುರಾಮ್ ನಿರ್ದೇಶನದ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಬಹುನಿರೀಕ್ಷಿತ ʼಸರ್ಕಾರು ವಾರಿಪಾಟʼ ಚಿತ್ರದ ಮೊದಲು ಲಿರಿಕಲ್ ವಿಡಿಯೋ ಸರಿಗಮಪ ತೆಲುಗು ಯುಟ್ಯೂಬ್ ಚಾನೆಲ್ ನಲ್ಲಿ ಕಳೆದ ತಿಂಗಳು ಬಿಡುಗಡೆ ಮಾಡಲಾಗಿತ್ತು.

ಈ ಹಾಡು ರಿಲೀಸ್ ಆದ 24 ಗಂಟೆಗಳಲ್ಲಿ 18 ಮಿಲಿಯನ್ ವೀಕ್ಷಣೆ ಪಡೆಯುವ ಮೂಲಕ ಟಾಲಿವುಡ್ ನಲ್ಲೇ 24 ಗಂಟೆಗಳಲ್ಲಿ ಅತಿವೇಗವಾಗಿ ಹೆಚ್ಚು ವೀಕ್ಷಣೆ ಪಡೆದ ಹಾಡು ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಈ ಹಾಡು ಇದೀಗ 100 ಮಿಲಿಯನ್ ವೀಕ್ಷಣೆ ಪಡೆದು ಮತ್ತೊಂದು ದಾಖಲೆ ಬರೆದಿದೆ.

ಕಲಾವತಿ ಎಂಬ ಈ ಹಾಡು ಸಿದ್ ಶ್ರೀರಾಮ್ ಧ್ವನಿಯಲ್ಲಿ ಮೂಡಿಬಂದಿದ್ದು, ಅನಂತ್ ಶ್ರೀರಾಮ್ ಸಾಹಿತ್ಯ ಹಾಗೂ ಎಸ್. ತಮನ್ ಸಂಗೀತ ಸಂಯೋಜನೆ ನೀಡಿದ್ದಾರೆ.

ಈ ಚಿತ್ರದಲ್ಲಿ ಕೀರ್ತಿ ಸುರೇಶ್ ನಾಯಕಿಯಾಗಿ ಅಭಿನಯಿಸಿದ್ದು, ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ಮಹೇಶ್ ಬಾಬು ಎಂಟರ್ಟೈನ್ಮೆಂಟ್ಸ್ ಹಾಗೂ 14 ರೀಲ್ ಪ್ಲಸ್ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದೆ. ಮೇ 12ರಂದು ತೆರೆಮೇಲೆ ಬರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...